spot_img
Wednesday, November 25, 2026
spot_img

ಕೆ-ಸೆಟ್ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ರಾಜ್ಯಮಟ್ಟದ ಸಾಧನೆ

ಕುಂದಾಪುರ: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) – ೨೦೨೬ ರಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರದ ವಿದ್ಯಾರ್ಥಿನಿ ರಶ್ಮಿ ಅವರು ವಾಣಿಜ್ಯ ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಐದನೇ ಅತ್ಯಧಿಕ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಇವರು ಜೂನ್ ೨೦೨೬ ರಲ್ಲಿ ನಡೆದ UGC NTA NET ಪರೀಕ್ಷೆಯಲ್ಲಿ ಕೂಡ ತೇರ್ಗಡೆ ಹೊಂದಿದ್ದಾರೆ.

ಜೊತೆಗೆ ಕಾಲೇಜಿನ ಒಟ್ಟು ೬ ವಿದ್ಯಾರ್ಥಿಗಳು ಏSಇಖಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿದ್ಯಾ, ಪ್ರತಿಮಾ, ವಿದ್ಯಾವತಿ, ಪ್ರತಿಮಾ ಹಾಗೂ ರಕ್ಷಿತಾ ಕ್ರಮವಾಗಿ ರಾಜ್ಯಕ್ಕೆ ೧೪, ೨೧, ೨೩, ೨೫ ಹಾಗೂ ೨೭ನೇ ಅತ್ಯಧಿಕ ಅಂಕಗಳನ್ನು ಗಳಿಸಿ ಕಾಲೇಜಿನ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದೆ.

ಇದು ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇವರ ಈ ಯಶಸ್ಸಿಗೆ ಕಾಲೇಜಿನ
ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂದಿನ ಶೈಕ್ಷಣಿಕ ಮತ್ತು ವೃತ್ತಿ ಜೀವನದಲ್ಲಿ ಅವರು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!