spot_img
Saturday, November 28, 2026
spot_img

ಕುಂದಾಪುರ: ಚೈತನ್ಯ ವಿಶೇಷ ಮಕ್ಕಳ ಶಾಲೆಯಲ್ಲಿ ಸೇವಾದಿನ ಕಾರ್ಯಕ್ರಮ

ಕುಂದಾಪುರ: ಶ್ರೀ ಕ್ರೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕುಂದಾಪುರ ಇವರ ವತಿಯಿಂದ ಚೈತನ್ಯ ವಿಶೇಷ ಮಕ್ಕಳ ಶಾಲೆ ವಡೇರಹೋಬಳಿ ಕುಂದಾಪುರದಲ್ಲಿ ಪರಮಪೂಜ್ಯ ವಿರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸೇವಾದಿನ ಆಚರಣೆ ಎಂಬ ವಿಶೇಷ ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳಿಗೆ ಬರವಣಿಗೆಯ ಪರಿಕರಗಳು, ಬೆಳಗ್ಗಿನ ಉಪಹಾರ ಹಾಗೂ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕಿನ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೆಟ್ಟಿ ಇವರು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಹಳ ವರ್ಷಗಳಿಂದ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅಂತಹ ಪರಮ ಪೂಜ್ಯರ ಸೇವಾದಿನಾಚರಣೆಯನ್ನು ವಿಶೇಷ ಮಕ್ಕಳೊಂದಿಗೆ ಇದ್ದು, ಆಚರಿಸುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ವೇದಿಕೆಯಲ್ಲಿ ಸುಜಾತ ನಕ್ಕಾಥಾಯವರು,  ಯೋಜನಾಧಿಕಾರಿ ಉಮೇಶ್ ಶೆಟ್ಟಿ ಎಚ್, ಕುಂದಾಪುರ ವಲಯದ ಮೇಲ್ವಿಚಾರಕರಾದ ಶಕುಂತಲಾ, ಹಣಕಾಸು ಪ್ರಬಂಧಕರಾದ ಶ್ರೀ ರೋಹಿತ್ ಬಾಬು ದೇವಾಡಿಗ, ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ರೇಣುಕಾ, ಆಡಳಿತ ಪ್ರಬಂಧಕರಾದ ರಾಧಿಕಾ ,ಕಛೇರಿ ಸಿಬ್ಬಂದಿಯಾದ ಗಣೇಶ್ ಇವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!