spot_img
Saturday, November 28, 2026
spot_img

ಸಾಧಕರ ಸಂಭ್ರಮಕ್ಕೆ ‘ಬಿಂಬ 3.0 ಕಿರೀಟ: ಶ್ರೀ ಶಾರದಾ ಶಾಲೆಯಲ್ಲಿ ಅದ್ದೂರಿ ಬಹುಮಾನ ವಿತರಣೆ

ಬಸ್ರೂರು: ಪ್ರತಿಭೆಗಳಿಗೆ ಪ್ರೋತ್ಸಾಹ, ಸಾಧಕರಿಗೆ ಸನ್ಮಾನ, ಕನಸುಗಳಿಗೆ ಹೊಸ ಚೈತನ್ಯ ನೀಡುವ ಸುಂದರ ವೇದಿಕೆಯಾಗಿ ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್‌ನ ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಬಸ್ರೂರು ಇಲ್ಲಿ ನವೆಂಬರ್ 26ರಂದು ‘ಬಿಂಬ 3.0-2k26 ಶೀರ್ಷಿಕೆಯಡಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕರಾದ ಸಂತೋಷ್ ಶೆಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಸಚಿನ್ ನಾಕ್‌ತಾಯ, ಶ್ರೀ ಶೇಖರ್ ಪೂಜಾರಿ, ಪೋಷಕ-ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರೇಮ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಗಮಿಸಿದ್ದ ಗಣ್ಯರನ್ನು ಶಾಲು ಹೊದಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಶಿಕ್ಷಕಿಯರಾದ ಉಷಾ, ಸವಿತಾ, ರಜನಿ, ಸೌಮ್ಯ ಹಾಗೂ ವೈಶಾಲಿ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಸಹಶಿಕ್ಷಕಿ ನಾಗಶ್ರೀ ಸ್ವಾಗತಿಸಿದರು.

ಮುಖ್ಯ ಅತಿಥಿ ಶ್ರೀ ಸಚಿನ್ ನಾಕ್‌ತಾಯ ಅವರು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜೀವನದ ಘಟನೆಯನ್ನು ಉಲ್ಲೇಖಿಸಿ, ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಪ್ರೇರೇಪಿಸಿದರು. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸಾಧನೆಯ ಹಾದಿಯಲ್ಲಿ ಮುನ್ನಡೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಾಲೆಯ ಪ್ರಗತಿಯ ಹಿಂದೆ ಶಿಕ್ಷಕರ ಪರಿಶ್ರಮ ಹಾಗೂ ಸಂಚಾಲಕರ ದೂರದೃಷ್ಟಿ ಮತ್ತು ಕ್ರಿಯಾಶೀಲತೆ ಪ್ರಮುಖ ಶಕ್ತಿಗಳಾಗಿವೆ ಎಂದು ಪ್ರಶಂಸಿಸಿದರು.

ಶೇಖರ್ ಪೂಜಾರಿ ಅವರು ಐದು ಬೆರಳುಗಳ ಉದಾಹರಣೆಯ ಮೂಲಕ ಪ್ರತಿಯೊಂದು ಮಗುವಿನಲ್ಲಿಯೂ ವಿಭಿನ್ನ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸುವುದು ಶಿಕ್ಷಕರ ಕರ್ತವ್ಯ ಎಂದು ಮನಮುಟ್ಟುವಂತೆ ವಿವರಿಸಿದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ದಿನಕರ ಶೆಟ್ಟಿ ಅವರು ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡದೆ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಪ್ರೇಮ ನಾಯ್ಕ್ ಅವರು ಮಕ್ಕಳನ್ನು ಪರಸ್ಪರ ಹೋಲಿಸದೆ ಅವರ ವೈಯಕ್ತಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರೋತ್ಸಾಹಿಸುವಂತೆ ಪೋಷಕರಿಗೆ ಕರೆ ನೀಡಿದರು. ಪೋಷಕ-ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರೇಮ ಅವರು ಶಾಲೆಯಲ್ಲಿ ಮೂಡಿಬರುವ ವಿನೂತನ ಕಾರ್ಯಕ್ರಮಗಳನ್ನು ಶ್ಲಾಘಿಸಿ, ಶಾಲೆಯ ಅಭಿವೃದ್ಧಿಗಾಗಿ ಸಂಚಾಲಕರ ಹಗಲಿರುಳಿನ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವವನ್ನು ಮನಮುಟ್ಟುವ ಕಥನದ ಮೂಲಕ ವಿವರಿಸಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಸಂತೋಷ್ ಶೆಟ್ಟಿ ಅವರು ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಷ್ಟಗಳಿಗೆ ಕುಗ್ಗದೆ ಆತ್ಮವಿಶ್ವಾಸದಿಂದ ಮುನ್ನಡೆದಾಗ ಯಶಸ್ಸು ಸಾಧ್ಯವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ನಂತರ ಒಂದರಿಂದ ಹತ್ತನೇ ತರಗತಿಯವರೆಗೆ ಶೈಕ್ಷಣಿಕ ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಒಂದರಿಂದ ಮೂರನೇ ತರಗತಿಯ ಬಹುಮಾನ ವಾಚನವನ್ನು ಸೌಮ್ಯ, ನಾಲ್ಕು ಮತ್ತು ಐದನೇ ತರಗತಿಯ ಬಹುಮಾನ ವಾಚನವನ್ನು ದಿವ್ಯ, ಆರನೇ ಮತ್ತು ಏಳನೇ ತರಗತಿಯ ಬಹುಮಾನ ವಾಚನವನ್ನು ವೀಣಾ ಡಿಮೆಲ್ಲೊ ಹಾಗೂ ಎಂಟು, ಒಂಬತ್ತು ಮತ್ತು ಹತ್ತನೇ ತರಗತಿಯ ಬಹುಮಾನ ವಾಚನವನ್ನು ಸವಿತಾ ನೆರವೇರಿಸಿದರು. ಗುಂಪುಗಳ ಕ್ರೀಡಾ ಸ್ಪರ್ಧೆಗಳ ವಿಜೇತರನ್ನು ಉಷಾ ಹಾಗೂ ಪೋಷಕರ ಕ್ರೀಡಾ ಸ್ಪರ್ಧೆಗಳ ವಿಜೇತರನ್ನು ಶ್ವೇತಾ ಪರಿಚಯಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಪ್ರಿಯಾ ಹಾಗೂ ಶ್ವೇತಾ ಅಚ್ಚುಕಟ್ಟಾಗಿ ನಿರ್ವಹಿಸಿದರು. ಶಿಲ್ಪಾಶ್ರೀ ವಂದನಾರ್ಪಣೆ ಸಲ್ಲಿಸಿದರು. ಶಾಲೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಯ ಸಹಕಾರದಿಂದ ಸಮಾರಂಭ ಯಶಸ್ವಿಯಾಗಿ ಸಂಪನ್ನಗೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!