spot_img
Wednesday, March 25, 2026
spot_img

ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ


ಕುಂದಾಪುರ : ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಬ್ರಮಣ್ಯ ಶಾಸ್ತ್ರಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 70 ಕೆಜಿ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪೂರ್ಣೇಶ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.


ಸಾಧನೆಗೈದ ಕಾಲೇಜಿನ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!