spot_img
Monday, March 23, 2026
spot_img

ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಒಂದು ವಿಭಾಗವನ್ನು ಇತರೆ ಕಾಯಿಲೆಗೆ ಚಿಕಿತ್ಸೆಗೆ ಮೀಸಲಿಡಲು ಆಗ್ರಹ

ಕುಂದಾಪುರ: ತಾಲ್ಲೂಕು ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ರೋಗಿಗಳಿಗೆ ಮೀಸಲಿಟ್ಟದ್ದಿರಿಂದ ಇತರ ಕಾಯಿಲೆಗೆ ಚಿಕಿತ್ಸೆಗೆ ಬರುವ ರೋಗಿಗಳು ಸೂಕ್ತ ಚಿಕಿತ್ಸೆ ದೊರಕದೆ ಅತಂತ್ರರಾಗಿದ್ದರೆ. ಇನ್ನಾದರೂ ಸಂಬಂಧಿತರು ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಒಂದು ವಿಭಾಗವನ್ನು ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವ ಒಳರೋಗಿಗಳಿಗೆ ಮೀಸಲಿಡಬೇಕು ಎಂದು ಬಸ್ರೂರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.


ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರು, ಇವರಿಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯಲು ಇವರಲ್ಲಿ ಸಾಮರ್ಥ್ಯವಿರುವುದಿಲ್ಲಾ ಹಾಗೂ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಗೆ ಹೋಗುಲು ಹೇಳುತ್ತಿದ್ದು ಅಲ್ಲೂ ಹಾಸಿಗೆ ಇನ್ನಿತರ ಸಮಸ್ಯೆಗಳು ಇರುವ ಬಗ್ಗೆ ರೋಗಿಗಳು ಹಾಗೂ ಅವರ ಸಂಬಂಧಿಕರು ನೋವನ್ನು ತೋಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಂಬಂಧಿತರು ಕೂಡಲೇ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲೇ ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವವರಿಗೆ ಅವಕಾಶ ಮಾಡಿಕೊಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!