Tuesday, April 16, 2024

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಕೆರಾಡಿ ಆಯ್ಕೆ


ಕೊಲ್ಲೂರು: ಎ.26: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಕೆರಾಡಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಏರ್ಪಟ್ಟು ಅಧ್ಯಕ್ಷ ಸ್ಥಾನಕ್ಕೆ ಡಾ| ಅತುಲ್ ಕುಮಾರ್ ಶೆಟ್ಟಿ ಮತ್ತು ಚಂದ್ರಶೇಖರ ಶೆಟ್ಟಿ ನಾಮಪತ್ರ ಸಲ್ಲಿಸಿದರು. ಚುನಾವಣೆಯಲ್ಲಿ ಚಂದ್ರಶೇಖರ ಶೆಟ್ಟಿ ಕೆರಾಡಿ ಅವರು 5 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ಡಾ|ಅತುಲ್ ಕುಮಾರ್ ಶೆಟ್ಟಿ 4 ಮತಗಳನ್ನು ಪಡೆದರು.


ಆರು ತಿಂಗಳ ಹಿಂದೆ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ ನಡೆದಿತ್ತು. ಅಧ್ಯಕ್ಷರ ಆಯ್ಕೆ ಮಾತ್ರ ಆಗಿರಲಿಲ್ಲ. ಅಂತೂ ಸೋಮವಾರ ಅದಕ್ಕೆ ಮುಹೂರ್ತ ಕೂಡಿಬಂದಿದ್ದು ಕೊನೆಗೂ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದೆ.


ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚಂದ್ರಶೇಖರ ಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿ, ಈ ಜಾಗದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅತ್ಯಂತ ಸಂತೋಷವಾಗುತ್ತದೆ. ಇಲ್ಲಿ ಅಧ್ಯಕ್ಷರು, ಸದಸ್ಯರು ಎಂಬ ಯಾವುದೇ ಬೇಧವಿಲ್ಲದೆ ಕೆಲಸ ಮಾಡಬೇಕು. ಸ್ವಾರ್ಥವಿಲ್ಲದೆ ನಿಸ್ವಾರ್ಥತೆಯಿಂದ ಸೇವೆ ಮಾಡುವ ಅವಕಾಶ ನಮಗೆ ಲಬಿಸಿಸಡ.ಕೋಟಿ ಕೋಟಿ ಭಕ್ತಾಧಿಗಳ ಮನದ ಬಯಕೆಗಳನ್ನು ಮೂಕಾಂಬಿಕೆ ಈಡೇರಿಸಿದ್ದಾಳೆ. ಈ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಕೊಲ್ಲೂರು ಕೇವಲ ಧಾರ್ಮಿಕತೆ ಮಾತ್ರವಲ್ಲದೇ ಶೈಕ್ಷಣಿಕವಾಗಿಯೂ ಗುರುತಿಸಿಕೊಂಡಿದೆ. ಕ್ಷೇತ್ರದ ಅಭಿವೃದ್ದಿ, ಶುಚಿತ್ವಕ್ಕೆ ಆದ್ಯತೆ ನೀಡುತ್ತಾ, ಹಿರಿಯರ, ಗ್ರಾಮಸ್ಥರ ಸಹಕಾರ ಮಾರ್ಗದರ್ಶನ ಪಡೆದುಕೊಳ್ಳುತ್ತಾ ಗರಿಷ್ಠ ಮಟ್ಟದಲ್ಲಿ ನಿಸ್ವಾರ್ಥತೆಯಿಂದ ಕೆಲಸ ಮಾಡುತ್ತೇವೆ ಎಂದ ಅವರು, ನನ್ನನ್ನು ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡಿದ ಸರ್ಕಾರಕ್ಕೂ, ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ವ್ಯವಸ್ಥಾಪನಾ ಸಮಿತಿ ಸದಸ್ಯರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.


ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ಕೆ.ರಾಜು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ|ಕೆ.ರಾಮಚಂದ್ರ ಅಡಿಗ, ಡಾ|ಅತುಲ್ ಕುಮಾರ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಕೆರಾಡಿ, ರತ್ನಾ ರಮೇಶ ಕುಂದರ್ ಕೊಲ್ಲೂರು, ಸಂಧ್ಯಾ ರಮೇಶ ಮಚ್ಚಟ್ಟು, ಗೋಪಾಲಕೃಷ್ಣ ಸೇನಾಪುರ, ಜಯಾನಂದ ಹೋಬಳಿದಾರ್ ಬೈಂದೂರು, ಗಣೇಶ ಕಿಣಿ ಬೆಳ್ವೆ, ಶೇಖರ ಪೂಜಾರಿ ಕಾರ್ಕಡ ನೇಮಕಗೊಂಡಿದ್ದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!