Sunday, September 8, 2024

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಕೋವಿಡ್ ಲಸಿಕೆ ನೋಂದಣಿಗೆ ಚಾಲನೆ


ಕುಂದಾಪುರ, ಎ.30: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ರಾಜ್ಯದಾದ್ಯಂತ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ ಕೋವಿಡ್ ಲಸಿಕೆ ನೀಡಲು ಸರಕಾರ ಮುಂದಾಗಿದ್ದು, ಉಡುಪಿ ಜಿಲ್ಲೆಯ ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯರಿಗೆ, ಗ್ರಾಹಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ಪಡೆಯಲು ಅನುಕೂಲವಾಗುವಂತೆ ಕೋವಿಡ್ ವ್ಯಾಕ್ಸಿನ್ ನೊಂದಾವಣೆ ಮಾಡುವ ಕಾರ್ಯಕ್ರಮವು ಹಾಕಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಪ್ರಥಮ ಬಾರಿಗೆ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಜರುಗಿತು.


ಇದೊಂದು ರಾಜ್ಯದಲ್ಲೆ ಮಾದರಿಯಾದ ಕಾರ್ಯಕ್ರಮವಾಗಿದೆ. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್ ವಿ., ಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿ ಕುಮಾರ್ ಶೆಟ್ಟಿ ಕಾರ್ಯಕ್ರಮದ ಮಾಹಿತಿ ನೀಡಿ ಸಂಘವು ತನ್ನ ಕಾರ್ಯವ್ಯಾಪ್ತಿಯ ಸದಸ್ಯರಿಗೆ ಮತ್ತು ಗ್ರಾಹಕರಿಗೆ ಉಚಿತ ಕೋವಿಡ್ ವ್ಯಾಕ್ಸಿನ್ ಪಡೆಯಲು ಅನುಕೂಲವಾಗುವಂತೆ ಈ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು.


ಈ ಸಂದರ್ಭದಲ್ಲಿ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಗ್ರಾಹಕರಾದ ವಿಶ್ವನಾಥ್ ಬೆಳ್ವೆ, ಸದಸ್ಯರಾದ ಮತ್ತು ನಿರ್ದೇಶಕರಾದ ಗಣಪತಿ ನಾಯ್ಕ ಬೆಳ್ವೆ, ಸದಸ್ಯರಾದ ಚಂದ್ರಿಕಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!