11 C
New York
Thursday, May 13, 2021

Buy now

spot_img

ತಲ್ಲೂರು ಜಂಕ್ಷನ್‌ನಲ್ಲಿ ಲಾರಿ ಢಿಕ್ಕಿ ಹೊಡೆದು ಮಹಿಳೆ ಸಾವು


ಕುಂದಾಪುರ : ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ತಲ್ಲೂರು ಸರ್ಕಲ್‌ನಲ್ಲಿ ಸೋಮವಾರ ಸಂಜೆ ನಡೆದಿದೆ.

ಸಬ್ಲಾಡಿ ನಿವಾಸಿ ನೇತ್ರಾವತಿ ಮೊಗವೀರ (40) ಮೃತ ದುರ್ದೈವಿ. ತಲ್ಲೂರು ಮೆಡಿಕಲ್‌ನಿಂದ ಔಷಧಿ ತೆಗೆದುಕೊಂಡು ಮನೆಗೆ ತೆರಳುವ ವೇಳೆ ರಸ್ತೆ ದಾಟುವ ಸಂದರ್ಭ ವೇಗವಾಗಿ ಕುಂದಾಪುರ ಕಡೆ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿಯ ಮುಂಭಾಗದ ಎಡಬದಿ ಟಯರ್‌ಗೆ ಸಿಲುಕಿ ಸ್ಪಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ತಕ್ಷಣ ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಗಲೇ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದರು.


ಮೃತ ನೇತ್ರಾವತಿ ಪತಿ ಈಗಾಗಲೇ ತೀರಿಕೊಂಡಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

Related Articles

Stay Connected

21,925FansLike
2,763FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!