spot_img
Tuesday, March 24, 2026
spot_img

ರಕ್ತವೆಂದರೆ ಕೆಂಪು ಬಂಗಾರ-ಕೊಲ್ಲೂರಿನಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಚಂದ್ರಶೇಖರ ಶೆಟ್ಟಿ ಅಭಿಮತ


ಕೊಲ್ಲೂರು: ರಕ್ತದಾನ ಪವಿತ್ರವಾದ ಕಾರ್ಯ. ರಕ್ತದಾನಕ್ಕೆ ಭವ್ಯ ಇತಿಹಾಸವಿದೆ. ರಕ್ತವೆಂದರೆ ಅದು ಕೆಂಪು ಬಂಗಾರ. ರಕ್ತದಾನ ಮಾಡುವ ಮನಸ್ಥಿತಿಯನ್ನು ಪ್ರತಿಯೊಬ್ಬರು ರೂಢಿಸಿಬೇಕು. ಪ್ರಸಕ್ತ ಸಂದರ್ಭದಲ್ಲಿ ರಕ್ತದಾನ ಹೆಚ್ಚು ಮಹತ್ವದ್ದಾಗಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅದ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಅಭಿಪ್ರಾಯ ಪಟ್ಟರು.


ಅವರು ವಿಶ್ವ ಹಿಂದೂ ಪರಿಷತ್, ಬಜರಂಗದಳ ಬೈಂದೂರು ಪ್ರಖಂಡ, ಗ್ರಾಮ ಪಂಚಾಯತ್ ಕೊಲ್ಲುರು ಮತ್ತು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಹಯೋಗದೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಕೊಲ್ಲೂರು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಭಟ್, ಬಿಜೆಪಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಜಯಾನಂದ ಹೋಬಳಿದಾರ್, ಸಂಧ್ಯಾ ರಮೇಶ್, ಬೈಂದೂರು ಭಜರಂಗದಳದ ತಾಲ್ಲೂಕು ಸಂಚಾಲಕ ಶ್ರೀನಿವಾಸ ಮುದ್ದೂರು, ಕೊಲ್ಲೂರು ಗ್ರಾ.ಪಂ.ಉಪಾಧ್ಯಕ್ಷ ಹರೀಶ್ ಶೆಟ್ಟಿ, ಕೊಲ್ಲೂರು ಗ್ರಾ.ಪಂ ಸದಸ್ಯ ಪ್ರಸನ್ನ ಶರ್ಮ, ನಾಗ ದಳಿ, ಕೊಲ್ಲೂರು ಠಾಣಾಧಿಕಾರಿ ನಾಸೀರ್ ಹುಸೇನ್, ರೆಡ್ ಕ್ರಾಸ್ ಸಂಸ್ಥೆಯ ವೀರೇಂದ್ರ ಗುಪ್ತಲ್ ಉಪಸ್ಥಿತರಿದ್ದರು.


ಜಗದೀಶ್ ಕೊಲ್ಲೂರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!