spot_img
Tuesday, March 24, 2026
spot_img

ಕುಂದಾಪುರ: ಪತ್ರಕರ್ತರಿಗೆ ಕೊರೋನಾ ಲಸಿಕೆ ಅಭಿಯಾನ


ಕುಂದಾಪುರ: ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಂದಾಪುರ ತಾಲೂಕು ಸಂಘದ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎರಡನೇ ಹಂತದಲ್ಲಿ ಜಿಲ್ಲೆಯ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರಿಗೆ ಕೋವಿಶೀಲ್ಡ್ ಮೊದಲ ಡೋಸನ್ನು ನೀಡುವ ಕಾರ್ಯಕ್ರಮ ಮೇ.೧೭ರಂದು ಕುಂದಾಪುರದ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಉಪಸ್ಥಿತರಿದ್ದು, ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರವೂ ಮಹತ್ತರವಾಗಿದೆ. ಸರ್ಕಾರ ಪತ್ರಕರ್ತರನ್ನು ದೃಶ್ಯ ಮಾಧ್ಯಮದ ಪ್ರತಿನಿಧಿಗಳನ್ನು ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದೆ. ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.


ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಸಂಘದ ಪದಾಧಿಕಾರಿಗಳು,ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!