spot_img
Tuesday, March 24, 2026
spot_img

ಕಾಳಾವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಶಾನಾಡಿ ಚಂದ್ರಶೇಖರ ಹೆಗ್ಡೆ ಅಧಿಕಾರ ಸ್ವೀಕಾರ


ಕುಂದಾಪುರ, ಮೇ.21: ಕಾಳಾವರ ಮಹಾಲಿಂಗೇಶ್ವರ ಮತ್ತು ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಶಾನಾಡಿ ಚಂದ್ರಶೇಖರ ಹೆಗ್ಡೆ ಕಾಳಾವರ ಮೇ.21ರಂದು ಅಧಿಕಾರ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರಾದ ಸತ್ಯನಾರಾಯಣ ಪುರಾಣಿಕ, ಅಶೋಕ್ ಕುಮಾರ್ ಶೆಟ್ಟಿ ಕಾಳಾವರ, ರಂಜಿತ್ ಕುಮಾರ ಶೆಟ್ಟಿ ಕಾಳಾವರ, ಭರತ್ ಕುಮಾರ ಶೆಟ್ಟಿ ಕಾಳಾವರ, ಚಂದ್ರ ಪೂಜಾರಿ ಅಸೋಡು, ಮಹೇಶ ಕಾಳಾವರ, ಶ್ರೀಲತಾ ಆಚಾರ್‍ಯ, ಲಲಿತ ಉಪಸ್ಥಿತರಿದ್ದರು.


ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಎಸ್.ಚಂದ್ರಶೇಖರ ಶೆಟ್ಟಿಯವರು ಈ ಹಿಂದೆ ಬೆಳಗೋಡು ಮಹಾಲಿಂಗೇಶ್ವರ ದೇವಸ್ಥಾನ ಶಾನಾಡಿ ಕೆದೂರು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದರು. ಪರಿಸರದ ಹಲವಾರು ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಓರಿಯಂಟಲ್ ಇನ್ಸೂರೆನ್ಸ್ ಕಂಪೆನಿಯ ಅಭಿವೃದ್ದಿ ಅಧಿಕಾರಿಯಾಗಿ ಇತ್ತೀಚೆಗೆ ನಿವೃತ್ತರಾದ ಇವರು, ಸಮಾಜಮುಖಿಯಾಗಿ ಗುರುತಿಸಿಕೊಂಡವರು. ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಇದರ ಸದಸ್ಯರಾಗಿ, 2005-06ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!