spot_img
Tuesday, March 24, 2026
spot_img

ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ಶೇ100 ಫಲಿತಾಂಶ


ಕುಂದಾಪುರ ಕುಂದೇಶ್ವರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ 2021 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ ಸಿಎಸ್‍ಇಇಟಿ ಪರೀಕ್ಷೆ ಬರೆದ 5 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಸಂಸ್ಥೆಗೆ ಇನ್ನೊಮ್ಮೆ ಸಿಎಸ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ತಂದಿದ್ದಾರೆ.


ಸಂಸ್ಥೆಯ ವಿದ್ಯಾರ್ಥಿಗಳಾದ ದಿಶಾ (131), ಜಯಲಕ್ಷ್ಮಿ (126), ದೀಪಿಕಾ (108), ಸುರಕ್ಷ (107), ವಿನುತ (100) ಅಂಕಗಳೊಂದಿಗೆ ಪ್ರಥಮ ಪ್ರಯತ್ನದಲ್ಲಿ ಸಿಎಸ್ ಫೌಂಡೇಶನ್ ಸಿಎಸ್‍ಇಇಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಶಿಕ್ಷ ಪ್ರಭ ಅಕಾಡೆಮಿಯು ಸಿಎ/ಸಿಎಸ್ ಮತ್ತು ಬ್ಯಾಂಕಿಂಗ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿದ್ದು ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.


ಕೋವಿಡ್ ಕಾರಣದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಹೊಡೆತ ಬಿದ್ದರು ಸಂಸ್ಥೆಯು ಆನ್ ಲೈನ್ ಮೂಲಕ ತರಗತಿಯನ್ನು ನಡೆಸಿ ಅನಂತರ ಆಫ್‍ಲೈನ್ ನಲ್ಲಿ ಪುನರಾವರ್ತಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ದಗೊಳಿಸಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರು ನಮ್ಮ ವಿದ್ಯಾರ್ಥಿಗಳ ಸಾಧನೆಗೆ ಅವರ ಕಠಿಣ ಪರಿಶ್ರಮ,ನಮ್ಮ ಬೋಧಕ ಸಿಬ್ಬಂದಿಗಳ ಅವಿರತ ಶ್ರಮ ಕಾರಣ, ವಿಶ್ವವೇ ಕೊರೋನಾದ ಚಿಂತೆಯಲ್ಲಿರುವಾಗ ನಮ್ಮ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗಳು ಹಾಕಿದ ಶ್ರಮಕ್ಕೆ ಇಂದು ಫಲ ನೀಡಿದೆ ಎನ್ನುತ್ತಾ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗಳನ್ನು ಅಭಿನಂದಿಸಿದರು. ಸಿಎ ಮತ್ತು ಸಿಎಸ್ ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕುಂದೇಶ್ವರ ರಸ್ತೆಯ ಶಿಕ್ಷ ಪ್ರಭ ಅಕಾಡೆಮಿಯ ಕಛೇರಿ ಅಥವಾ www.shikshaprabha.com ಗೆ ಲಾಗಿನ್ ಮಾಡಬಹುದು ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!