spot_img
Tuesday, March 24, 2026
spot_img

ಕಡಲ್ಕೊರೆತದ ತೀವ್ರತೆ ಹೆಚ್ಚಿರುವಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚನೆ-ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ


ಗಂಗೊಳ್ಳಿ: ತೌಕ್ತೇ’ ಚಂಡಮಾರುತದ ಪರಿಣಾಮ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಲ ತೀರದಲ್ಲಿ ಕಡಲ್ಕೊರೆತ, ಕಡಲಿನ ಅಲೆಗಳ ಅಬ್ಬರಕ್ಕೆ ಮನೆ, ದೋಣಿ, ಮೀನುಗಾರಿಕೆ ಶೆಡ್, ಬೋಟು ಹಾಗೂ ಆಸ್ತಿಪಾಸ್ತಿಗೆ ವ್ಯಾಪಕ ಹಾನಿ ಉಂಟಾಗಿದೆ. ಮಳೆಗಾಲ ಸಮೀಪಿಸುತ್ತಿರುವುದರಿಂದ ಕಡಲ್ಕೊರೆತದ ತೀವ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.


ಕಡಲ್ಕೊರೆತ ಮತ್ತು ಚಂಡಮಾರುತದಿಂದ ತೀವ್ರ ಹಾನಿಗೊಂಡ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಪ್ರದೇಶಕ್ಕೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿ, ಸ್ಥಳೀಯರ ಅಹವಾಲು ಆಲಿಸಿ ಅವರು ಮಾತನಾಡಿದರು.


ಚಂಡಮಾರುತದಿಂದ ಆದ ಹಾನಿ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಲಿದ್ದು, ಈ ಬಗ್ಗೆ ಕೈಗೊಳ್ಳಬೇಕಾದ ಅಗತ್ಯ ತುರ್ತು ಕ್ರಮಗಳ ಮತ್ತು ಪರಿಹಾರದ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು, ಸಂಸದರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.


ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಮೇಸ್ತ, ಗುಜ್ಜಾಡಿ ಗ್ರಾಪಂ ಮಾಜಿ ಸದಸ್ಯ ದೇವದಾಸ ಖಾರ್ವಿ, ಬಿಜೆಪಿ ಗುಜ್ಜಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಸೋಮನಾಥ ಮೇಸ್ತ, ರೋಶನ್ ಫೆರ್ನಾಂಡಿಸ್, ರವಿ ಖಾರ್ವಿ, ಪಕ್ಷದ ಕಾರ್ಯಕರ್ತರು, ಸ್ಥಳೀಯ ನಾಗರಿಕರು ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!