Sunday, September 8, 2024

ಕೋವಿಡ್-19 ಚಿಕಿತ್ಸೆಗೆ ದರ ನಿಗಧಿ


ಉಡುಪಿ: ಕೋವಿಡ್-19 ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ.


ಜಿಲ್ಲೆಯ ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಅನ್ನು ಉಚಿತವಾಗಿ ಒದಗಿಸಲಾಗುತ್ತದೆ.


ಕೋವಿಡ್ ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಸರ್ಕಾರವು ನಿಗಧಿಪಡಿಸಿರುವ ಜನರಲ್ ವಾರ್ಡ್‍ಗೆ 10,000 ರೂ., ಐಸೋಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15,000 ರೂ., ಹೆಚ್‍ಡಿಯು 12,000 ರೂ., ಐಸೋಲೇಷನ್ ಐಸಿಯು ವೆಂಟಿಲೇಟರ್ ಸಹಿತ 25,000 ರೂ., ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ.


ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಲ್ಲಿ, ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗಧಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ ಟೋಲ್ ಫ್ರೀ ಸಂಖ್ಯೆ: 1800 425 8330 ಗೆ ಹಾಗೂ 1912 ಗೆ ಕರೆ ಮಾಡಿ ದೂರು ನೀಡಬಹುದು ಅಥವಾ ಇ-ಮೇಲ್ sastgrievance@gmail.com ಗೆ ದೂರು ಸಲ್ಲಿಸಬಹುದು ಹಾಗೂ ದೂ. ಸಂಖ್ಯೆ: 080-22536200 ಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!