spot_img
Monday, March 23, 2026
spot_img

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದಿಂದ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕ ವಾಹನ ಕೊಡುಗೆ


ಕುಂದಾಪುರ, ಮೇ.26: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ವಂಡ್ಸೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕ ವಾಹನವನ್ನು ನೀಡಲಾಗಿದ್ದು, ಅದನ್ನು ಮೇ.26ರಂದು ಹಸ್ತಾಂತರಿಸಲಾಯಿತು.


ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾಹನದ ಅವಶ್ಯಕತೆಯನ್ನು ಮನಗಂಡು ತಾತ್ಕಾಲಿಕ ನೆಲೆಯಲ್ಲಿ ವಾಹನದ ವ್ಯವಸ್ಥೆ ಕಲ್ಪಿಸಿದೆ. ಈ ಸಂದರ್ಭದಲ್ಲಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸಬ್ಲಾಡಿ ಎನ್.ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ, ನಿರ್ದೇಶಕರಾದ ಸಂಜೀವ ಪೂಜಾರಿ, ಜಯರಾಮ ಶೆಟ್ಟಿ ಹಾಗೂ ಇತರ ನಿರ್ದೇಶಕರುಗಳು, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಸನ್ಮಾನ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಹಾಗೂ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!