Sunday, April 28, 2024

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ 369 ಕೋಟಿ ರೂ. ಕೇಂದ್ರದಿಂದ ಮಂಜೂರು- ಶೋಭಾ ಕರಂದ್ಲಾಜೆ


ಉಡುಪಿ: 2021-22ನೇ ಆರ್ಥಿಕ ವರ್ಷದಲ್ಲಿಉಡುಪಿ-ಚಿಕ್ಕಮಗಳೂರು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ರೂ. 369 ಕೋಟಿ ಕೇಂದ್ರದಿಂದ ಮಂಜೂರು ಗೊಂಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.


ರಾಷ್ಟ್ರೀಯ ಹೆದ್ದಾರಿ ಹೆಬ್ರಿ-ಪರ್ಕಳ ರಸ್ತೆ, ಕರಾವಳಿ ಜಂಕ್ಷನ್-ಮಲ್ಪೆ ಸಂಪರ್ಕಿಸುವ ರಸ್ತೆಗಳನ್ನು ಚತುಷ್ಪಥೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಒಟ್ಟು 29.1 ಕಿ ಮೀ ಉದ್ದದ ಕಾಮಗರಿಗಳಿಗೆ ಭೂ ಸಾರಿಗೆ ಸಚಿವಾಲಯ ಅಂದಾಜು ಮೊತ್ತ 350.00 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ.


ರಾಷ್ಟ್ರೀಯ ಹೆದ್ದಾರಿ ಸೀತಾನದಿ ಬಳಿಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ತೊಂದರೆಗಳನ್ನು ಸರಿಪಡಿಸಲು, ತಡೆಗೋಡೆ ನಿರ್ಮಾಣ, ರಸ್ತೆ ಎತ್ತರಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರು ಬಳಿ ರಸ್ತೆ ಎತ್ತರಿಸಿ ತಡೆಗೋಡೆಯನ್ನು ನಿರ್ಮಾಣ ಮಾಡುವ ಕಾಮಗಾರಿಗಳಿಗೆ ಅಂದಾಜು ಮೊತ್ತ 19 ಕೋಟಿ ರೂಪಾಯಿಗಳ ಅನುಮೋದನೆಯನ್ನು ಕೇಂದ್ರ ಭೂ ಸಾರಿಗೆ ಸಚಿವಾಲಯ ನೀಡಿದೆ.


ದೇಶ ಕೋವಿಡ್ ಸೋಂಕಿನ ಸಂಕಷ್ಟದಲ್ಲಿ ಇರುವ ಸಂದರ್ಭದಲ್ಲೂ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಆದ್ಯತೆ ನೀಡಿ ರೂಪಾಯಿ 369 ಕೋಟಿಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕೆ ಹಾಗೂ ವಿಶೇಷವಾಗಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ವಿಶೇಷವಾದ ಧನ್ಯವಾದ ಹಾಗು ಕೃತಜ್ಞತೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!