19 C
New York
Monday, June 14, 2021

Buy now

spot_img

ಜಡ್ಕಲ್, ಶಿರೂರು, ನಾಡಾ, ಗಂಗೊಳ್ಳಿ, ಆಲೂರು ಗ್ರಾಮ ಪಂಚಾಯಿತಿಗಳಲ್ಲಿ ಪೂರ್ಣ ಪ್ರಮಾಣದ ಲಾಕ್ ಡೌನ್ ಮುಂದುವರಿಕೆ


ಉಡುಪಿ: ಜಿಲ್ಲೆಯಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವುದರ ಜೊತೆಗೆ ಕೋವಿಡ್‍ನ ಮೂರನೇ ಅಲೆಯ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.


ಅವರು ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣಕುರಿತ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕೋವಿಡ್ ನಿಯಂತ್ರಣಕ್ಕೆ ಲಾಕ್‍ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವಗ್ರಾಮ ಪಂಚಾಯತ್‍ಗಳನ್ನು ಸಂಪೂರ್ಣವಾಗಿ ಲಾಕ್‍ಡೌನ್‍ ಮುಂದುವರೆಸಬೇಕು ಎಂದರು.


ಕಳೆದ ಐದು ದಿನಗಳಿಂದ 50 ಕ್ಕೂ ಹೆಚ್ಚು ಪ್ರಕರಣಗಳು ಇರುವಗ್ರಾಮಪಂಚಾಯತ್‍ಗಳನ್ನು ಪೂರ್ಣ ಪ್ರಮಾಣದ ಲಾಕ್‍ಡೌನ್ ಮಾಡಿದ ಹಿನ್ನೆಲೆಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿವೆ. ಈ ಹಿನ್ನೆಲೆ ಪ್ರಸಕ್ತ50 ಕ್ಕೂ ಪ್ರಕರಣಗಳಿರುವ ಬೈಂದೂರು ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ ಬೆಳ್ಮಣ್, ಮಿಯಾರು, ಪಳ್ಳಿ, ಕುಕ್ಕುಂದೂರು, ನಲ್ಲೂರು, ಮರ್ಣೆ, ಹೆಬ್ರಿಯ ವರಂಗ, ಕುಂದಾಪುರದ ಗಂಗೊಳ್ಳಿ, ಆಲೂರು, ಕಾಪುವಿನ ಶಿರ್ವ, ಬೆಳ್ಳೆ, ಬ್ರಹ್ಮಾವರದಆವರ್ಸೆ, ಕೊಕ್ಕರ್ಣೆಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿಪೂರ್ಣ ಪ್ರಮಾಣದ ಲಾಕ್‍ಡೌನ್ ಮಾಡಬೇಕೆಂದರು.

ಜಿಲ್ಲೆಯಲ್ಲಿ 4085 ಸಕ್ರೀಯ ಪ್ರಕರಣಗಳಿದ್ದು, ಅವುಗಳಲ್ಲಿ 487 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 149 ಜನಕೋವಿಡ್‍ಕೇರ್ ಸೆಂಟರ್‍ನಲ್ಲಿ ಹಾಗೂ 3,449 ಜನರು ಹೋಂ ಐಸೋಲೇಷನ್‍ನಲ್ಲಿ ಇದ್ದಾರೆ ಎಂದ ಅವರು ಜಿಲ್ಲೆಯಲಿ ್ಲಒಟ್ಟು 20 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬಂದಿದ್ದು, ಅವುಗಳಲ್ಲಿ 6 ಪ್ರಕರಣಗಳು ಜಿಲ್ಲೆಯವರಾಗಿದ್ದು, 14 ಪ್ರಕರಣಗಳು ಹೊರಜಿಲ್ಲೆಯಿಂದ ಬಂದವರದ್ದಾಗಿದೆ.ಹೆಚ್ಚಿನಚಿಕಿತ್ಸೆಗಾಗಿ ಮಂಗಳೂರಿನ ವೆನ್‍ಲಾಕ್‍ಆಸ್ಪತ್ರೆಗೆ 4 ಪ್ರಕರಣಗಳು ಶಿಫ್ಟ್ ಆಗಿದ್ದು, ಅವರುಅಲ್ಲಿ2 ಜನಮರಣ ಹೊಂದಿದ್ದಾರೆ.ಜಿಲ್ಲೆಯಲ್ಲಿ6 ಜನರುಗುಣಮುಖ ಹೊಂದಿದ್ದರೆ, 8 ಜನಚಿಕಿತ್ಸೆ ಪಡೆಯುತ್ತಿದ್ದಾರೆ.
3 ನೇ ಅಲೆಕೋವಿಡ್ ನಿರೋಧಕ ಲಸಿಕೆ ಪಡೆಯದ ಮಕ್ಕಳನ್ನು ಬಾದಿಸುವ ಸಾಧ್ಯತೆಗಳಿವೆ. ಮಾಧ್ಯಮಗಳಲ್ಲಿ ತಜ್ಞರು ಸಹ ಇದೇಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಅಗತ್ಯವಿರುವಎಲ್ಲಾರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಒಂದೊಮ್ಮೆ ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ಚಿಕಿತ್ಸೆ ನೀಡಲುಅಗತ್ಯವಿರುವ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಉತ್ತಮಚಿಕಿತ್ಸೆ ನೀಡಬೇಕುಎಂದರು.


ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯಇರುವ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಈಗಾಗಲೇ ಸರ್ಕಾರ ಸ್ವಾಮ್ಯದ ಹಾಗೂ ಖಾಸಗಿ ಸಂಸ್ಥೆಗಳು ಸಹಾಯ ಹಸ್ತ ನೀಡಿದ್ದು, ಇವುಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.
ಜನರು ಸಹ ತಮ್ಮದೈನಂದಿನ ಅಗತ್ಯತೆ ವಸ್ತುಗಳನ್ನು ಖರೀದಿ ಮಾಡಲುಅವಶ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ಅಂತಹ ಸಂದರ್ಭದಲ್ಲಿ ಮಾಸ್ಕ್‍ಧರಿಸುವುದು, ಸಾಮಾಜಿಕಅಂತರ ಕಾಯ್ದುಕೊಳ್ಳುವುದರೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.


ಶಾಸಕ ಸುನೀಲ್‍ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿಕೋವಿಡ್ ಸೋಂಕಿತರ ಮನೆಗಳನ್ನು ಕಡ್ಡಾಯವಾಗಿ ಸೀಲ್‍ಡೌನ್ ಮಾಡಬೇಕು ಎಂದಅವರು ಪ್ರತಿಯೊಂದುಗ್ರಾಮ ಪಂಚಾಯತ್‍ಗಳಲ್ಲೂ ಕೋವಿಡ್ ಟೆಸ್ಟಿಂಗ್, ಟ್ರೇಸಿಂಗ್ ಹಾಗೂ ಟ್ರೀಟ್‍ಮೆಂಟ್ ನಿಯಮವನ್ನು ತಪ್ಪದೇ ಮಾಡಬೇಕು ಎಂದರು.


ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಕೋವಿಡ್ ನಿರೋಧಕ ಲಸಿಕೆಯನ್ನು ನೀಡಲುಟೋಕನ್ ವಿತರಣೆಯನ್ನು ಪಾರದರ್ಶಕವಾಗಿ ಮಾಡುವುದರೊಂದಿಗೆ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂದ ಅವರು ಸಾಮಾನ್ಯವಾಗಿಗ್ರಾಮೀಣಭಾಗದಲ್ಲಿಕೋವಿಡ್ ಸೋಂಕು ಹಬ್ಬ ಹಾಗೂ ಮದುವೆ ಕಾರ್ಯಕ್ರಮಗಳಿಂದ ಹೆಚ್ಚು ಜನರಿಗೆ ಸೋಂಕು ಹರಡುತ್ತಿದೆ.ಇದಕ್ಕೆ ನಿರ್ಬಂಧ ಹೇರುವುದು ಸೂಕ್ತ ಎಂದರು.


ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಕೊರೋನಾ ನಿರೋಧಕ ಚುಚ್ಚುಮದ್ದನ್ನು ಜಿಲ್ಲೆಯಲ್ಲಿ2,75,064ಜನರಿಗೆಒಂದನೇಡೋಸ್ ಲಸಿಕೆ ನೀಡಲಾಗಿದ್ದು, 87,360 ಜನರಿಗೆ ಎರಡನೇ ಲಸಿಕೆ ನೀಡುವುದರೊಂದಿಗೆ ಶೇಕಡ 20.37 ಆಗಿದೆ. ಇದು ರಾಜ್ಯದಲ್ಲಿಯೇ ಹೆಚ್ಚು ಚುಚ್ಚುಮದ್ದು ನೀಡಿರುವ ಜಿಲ್ಲೆಯಾಗಿದ್ದು, ರಾಜ್ಯದಿಂದ ಹೆಚ್ಚುವರಿಕೋವಿಡ್ ಲಸಿಕೆ ಸರಬರಾಜು ಮಾಡಿದ್ದಲ್ಲಿ ಅವುಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಕಾಪು ತಾಲೂಕಿನಕೊತ್ತಲ್‍ಕಟ್ಟೆ ಹಾಗೂ ಭರತ್ ನಗರಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆ ಅವುಗಳನ್ನು ಕಂಟೈನ್‍ಮೆಂಟ್ ಝೋನ್‍ಗಳೆಂದು ಘೋಷಿಸುವುದರೊಂದಿಗೆ ಸೋಂಕು ಹರಡದಂತೆಕ್ರಮ ವಹಿಸಬೇಕು ಎಂದು ತಿಳಿಸಿದರು.


ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಅಪರಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣಉಡುಪ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
2,812FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!