spot_img
Monday, March 23, 2026
spot_img

ಕೃಷಿ ಪಂಡಿತ ಪ್ರಶಸ್ತಿ : ರೈತರಿಂದ ಅರ್ಜಿ ಆಹ್ವಾನ


ಉಡುಪಿ: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಠ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ.


ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.


ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು , ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು, ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂನ್ 20 ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.


ಕೃಷಿ ಪಂಡಿತ ಪ್ರಶಸ್ತಿಯು ಪ್ರಥಮ ಬಹುಮಾನ ರೂ. 1,25,000 ದ್ವಿತೀಯ 1,00,000 ತೃತೀಯ 75,000 ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 50, 000 ರೂ ಗಳನ್ನು ಒಳಗೊಂಡಿರುತ್ತದೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!