spot_img
Thursday, March 26, 2026
spot_img

ಪಡುಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ನಾಡಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪರಿಕರಗಳ ಕೊಡುಗೆ


ಕುಂದಾಪುರ, ಜೂ.24: ಪಡುಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ನಾಡಾ ಇದರ ವತಿಯಿಂದ ನಾಡಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ಪರಿಕರಗಳನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ, ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮ ಅಮೂಲ್ಯವಾದುದು. ಅವರ ಕೆಲಸದಿಂದ ಕೊರೋನಾ ತಡೆಗಟ್ಟುವಲ್ಲಿ ಸಾಧ್ಯವಾಯಿತು. ಅದಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಭಿನಂದಿಸುತ್ತೇವೆ ಎಂದರು.


ನಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಚಿಕ್ಮರಿ ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಜೀವ ಭಂಡಾರಿ, ನಿರ್ದೇಶಕರಾದ ಪಿ.ನರಸಿಂಹ ಮೂರ್ತಿ, ಗಣೇಶ ಪೂಜಾರಿ, ಸುಬ್ರಹ್ಮಣ್ಯ ಆಚಾರ್ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ ಎಂ ಸ್ವಾಗತಿಸಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ, ರಾಜೇಶ ಪಡುಕೋಣೆ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!