spot_img
Thursday, March 26, 2026
spot_img

ಆಗುಂಬೆ ಘಾಟಿ- ಭಾರಿ ವಾಹನಗಳ ಸಂಚಾರ ನಿಷೇಧ


ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ 12 ಟನ್‍ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.


ಬದಲಿ ಮಾರ್ಗದ ವಿವರ: ಉಡುಪಿ – ಸಿದ್ದಾಪುರ – ಹೊಸಂಗಡಿ- ಬಾಳೆಬರೇ ಘಾಟ್‍ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್-ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!