spot_img
Thursday, March 26, 2026
spot_img

ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಗಂಗೊಳ್ಳಿಯ ಜಿ.ವಿಠಲದಾಸ್ ಶ್ರೀನಿವಾಸ ಭಟ್ ಅವರಿಗೆ ಗೌರವಾರ್ಪಣೆ

ಕುಂದಾಪುರ: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸೆರೆಮನೆ ವಾಸ ಅನುಭವಿಸಿದ ಗಂಗೊಳ್ಳಿಯ ಜಿ.ವಿಠಲದಾಸ್ ಶ್ರೀನಿವಾಸ ಭಟ್ ಅವರನ್ನು ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇವರ ವತಿಯಿಂದ ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿನ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ವಿಠಲದಾಸ್ ಶ್ರೀನಿವಾಸ ಭಟ್, ಇಂದು ದೇಶದಾದ್ಯಂತ ತುರ್ತು ಪರಿಸ್ಥಿತಿಯ ಕರಾಳ ದಿನ ವನ್ನು ಆಚರಿಸುತ್ತಾ ಇದ್ದೇವೆ. ಇಂದಿರಾ ಗಾಂಧಿ ನೇತತ್ವದ ಕಾಂಗ್ರೆಸ್ ಸರ್ಕಾರ ೨೧ ತಿಂಗಳ ತುರ್ತು ಪರಿಸ್ಥಿತಿಯನ್ನು ದೇಶದ ಮೇಲೆ ಹೇರಿತ್ತು. ಆ ಸಂದರ್ಭದಲ್ಲಿ ನಮ್ಮ ಹಿರಿಯರು ಅದನ್ನು ವಿರೋಧಿಸಿ ಹೋರಾಟ ಮಾಡಿ ನರಕ ಯಾತನೆಯನ್ನು ಅನುಭವಿಸಿದ್ದಾರೆ. ವರ್ಷಗಳ ಕಾಲ ಸೆರೆಮನೆ ಸೇರಿದವರೂ ಇದ್ದಾರೆ. ಆ ಕರಾಳ ದಿನಗಳು ಮತ್ತು ನಮ್ಮವರು ಮಾಡಿದ ತ್ಯಾಗ ಬಲಿದಾನಗಳನ್ನು ನಮ್ಮ ಇಂದಿನ ಪೀಳಿಗೆ ತಿಳಿವುದು ತುಂಬಾ ಅವಶ್ಯಕವಾಗಿದೆ ಎಂದು ಹೇಳಿದರು.


ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ್ ಖಾರ್ವಿ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಉಪಾಧ್ಯಕ್ಷ ವಿನೋದ್ ಭಂಡಾರಿ, ಕಾರ್ಯದರ್ಶಿ ಕಿಶೋರ್ ಶೆಟ್ಟಿ, ಕುಂದಾಪುರ ತಾಪಂ ಮಾಜಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮ ಸಿ.ಪೂಜಾರಿ, ಸದಸ್ಯರಾದ ಬಿ.ರಾಘವೇಂದ್ರ ಪೈ, ಬಿ.ಲಕ್ಷ್ಮೀಕಾಂತ ಮಡಿವಾಳ, ತ್ರಾಸಿ ಮಹಾಶಕ್ತಿ ಅಧ್ಯಕ್ಷ ರವಿ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಅಶೋಕ್ ಎನ್.ಡಿ., ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಾಂತಿ ಖಾರ್ವಿ, ಕಂಬದಕೋಣೆ ಮಹಾಶಕ್ತಿ ಅಧ್ಯಕ್ಷ ರಮೇಶ್ ಪೂಜಾರಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ್ ಮೇಸ್ತ, ಮೀನುಗಾರಿಕ ಪ್ರಕೋಷ್ಠ ಸಹ ಸಂಚಾಲಕ ಸಂದೀಪ್ ಖಾರ್ವಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!