spot_img
Thursday, March 26, 2026
spot_img

ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ಉಪಕರಣ, ಔಷಧಗಳ ಕೊಡುಗೆ


ಸಿದ್ದಾಪುರ: ಸ್ಪಾರ್ಧತ್ಮಾಕ ಈ ಕಾಲ ಘಟ್ಟದಲ್ಲಿ ಸರಕಾರಿ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳ ನಡುವೆ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಅವರು ಹೇಳಿದರು.


ಅವರು ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘ ಮತ್ತು ಕುಂದಾಪುರ ತಾಲೂಕು ಆರೋಗ್ಯ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ವ್ಯಾಪ್ತಿಯ ಹಳ್ಳಿಹೊಳೆ, ಯಡಮೊಗೆ ಮತ್ತು ಆಜ್ರಿ ಉಪ ಆರೋಗ್ಯ ಕೇಂದ್ರಗಳಿಗೆ ಸುಮಾರು 50ಸಾವಿರ ಮೌಲ್ಯದ ವೈದ್ಯಕೀಯ ಉಪಕರಣ ಮತ್ತು ಔಷಧಗಳನ್ನು ಜೂ. 23ರಂದು ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿತರಿಸಿ ಮಾತನಾಡಿದರು.
ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ವಿ. ಅರುಣ್‌ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು.


ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಶಂಕರನಾರಾಯಣ ಯಡಿಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಹಳ್ಳಿಹೊಳೆ ಗ್ರಾ.ಪಂ. ಅಧ್ಯಕ್ಷ ಪ್ರದೀಪ ಕೊಠಾರಿ, ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ನಾಗಪ್ಪ ಪೂಜಾರಿ, ನಿರ್ದೇಶಕರಾದ ರಾಜು ಪೂಜಾರಿ ಹನ್ಕಿ, ರವಿ ಗಾಣಿಗ ಆಜ್ರಿ, ಸುಬ್ರಾಯ ಹೆಗ್ಡೆ ಇಳಲಿ, ಪ್ರಭಾಕರ ನಾಯ್ಕ, ರಘರಾಮ ಶೆಟ್ಟಿ, ರತ್ನಾಕರ ಶೆಟ್ಟಿ, ಕರುಣಾಕರ ನಾಯ್ಕ, ಜಯರಾಮ ನಾಯ್ಕ, ಎಸ್. ರಾಜು, ಜ್ಯೋತಿ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕಾಂತ ಕನ್ನಂತ, ಫಿಲ್ಡ್ ಆಫೀಸರ್ ಶ್ರೀನಿವಾಸ್, ಕುಂದಾಪುರ ತಾಲೂಕು ಆರೋಗ್ಯ ಸಹಕಾರಿ ಸಂಘದ ಉಪಾಧ್ಯಕ್ಷ ನಾಗಪ್ಪ ಕೊಠಾರಿ, ನಿರ್ದೇಶಕಿ ಶಕುಂತಳಾ ಯಡಿಯಾಳ, ಪ್ರಧಾನ ಕಾರ್ಯದರ್ಶಿ ಶ್ರೀಪತಿ ಕನ್ನಂತ ಮೊದಲಾದವರು ಉಪಸ್ಥಿತರಿದ್ದರು.


ಕುಂದಾಪುರ ತಾಲೂಕು ಆರೋಗ್ಯ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ಯಡಿಯಾಳ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು.
ಸತೀಶ ಭಟ್ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಕೊಠಾರಿ ಸಹಕರಿಸಿದರು. ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶ್ರಾವ್ಯ ಎಚ್., ಅವರು ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!