spot_img
Sunday, May 10, 2026
spot_img

ಉಡುಪಿ ಜಿಲ್ಲೆಯಲ್ಲಿ ಜುಲೈಯಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು-ಖಾಸಗಿ ಬಸ್ ಮಾಲಕರೊಂದಿಗೆ ಸಭೆ


ಉಡುಪಿ: ಕೋವಿಡ್ – 19 ಲಾಕ್ ಡೌನ್‌ನಿಂದ ಬಸ್ಸು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್‌ಲಾಕ್ ಆದರೂ ಬಸ್ಸು ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಸಂಕಷ್ಟ ಪಡುವುದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಬಸ್ಸು ಸಂಚಾರ ಪುನರಾರಂಭಿಸಲು ಜೂ.25 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.


ಸಭೆಯಲ್ಲಿ ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!