spot_img
Monday, March 23, 2026
spot_img

ಕಲಾವಿದ ಸುಬ್ರಹ್ಮಣ್ಯ ಮೊಗವೀರ ಮನೆಗೆ ಬೈಂದೂರು ಶಾಸಕರ ಭೇಟಿ


ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕಲಾವಿದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರರ ಮನೆಗೆ ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಆರ್ಥಿಕವಾಗಿ ತೀವ್ರ ಸಂಕಷ್ಟ ಎದುರಿಸುತ್ತಿರುವ ಸುಬ್ರಹ್ಮಣ್ಯ ಮೊಗವೀರರಿಗೆ ಆರ್ಥಿಕ ಸಹಾಯಧನ ನೀಡಿ ಧೈರ್ಯ ತುಂಬಿದರು. ವಾಸಿಸಲು ಸರಿಯಾದ ಮನೆ ಇಲ್ಲದಿರುವುದನ್ನು ಗಮನಿಸಿದ ಶಾಸಕರು ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿ ಕೊಡುವುದಾಗಿ ತಿಳಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಮನೆ ನಿರ್ಮಿಸಲು ಬೇಕಾಗುವ ಹೆಂಚುಗಳನ್ನು ಸ್ವತಃ ಉಚಿತವಾಗಿ ಒದಗಿಸುವುದಾಗಿಯೂ, ಅಗತ್ಯ ಎಲ್ಲಾ ಸಲಕರಣೆಗಳನ್ನು ಸ್ಥಳಿಯ ಮುಖಂಡರ ಮೂಲಕವಾಗಿ ಉಚಿತವಾಗಿ ಕೊಡಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!