21.3 C
New York
Friday, September 17, 2021

Buy now

spot_img

ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿಯವರಿಗೆ ಗೌರವಾರ್ಪಣೆ


ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ, ಕುಂದಾಪುರ ಜಿಲ್ಲಾ ಹೋರಾಟ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಕೆರಾಡಿ ಚಂದ್ರಶೇಖರ ಶೆಟ್ಟಿಯವರನ್ನು ಕುಂದಾಪುರ ಜಿಲ್ಲಾ ಹೋರಾಟ ಸಮಿತಿಯ ವತಿಯಿಂದ ಗೌರವಿಸಲಾಯಿತು.


ಕುಂದಾಪುರ ಜಿಲ್ಲಾ ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ನೇತೃತ್ವದ ನಿಯೋಗ ಕೊಲ್ಲೂರು ದೇವಳದಲ್ಲಿ ಕೆರಾಡಿ ಚಂದ್ರಶೇಖರ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಶೆಟ್ಟಿಯವರು ಕೊಲ್ಲೂರು ದೇವಳದ ಮೂಲಕ ಜನರ ಮನಸ್ಸಿನಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವ ಕೆಲಸ ಮಾಡುತ್ತೇನೆ. ಕುಂದಾಪುರ ಜಿಲ್ಲಾ ಹೋರಾಟಕ್ಕೆ ಮುಂದೆಯೂ ಸಹ ನಿಮ್ಮೆಲ್ಲರ ಜೊತೆಗಿರುತ್ತೇನೆ ಎಂದರು.


ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕ ಮುಂಬಾರು ದಿನಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಣಪತಿ ಟಿ.ಶ್ರೀಯಾನ್, ಶಂಕರನಾರಾಯಣ ತಾಲೂಕು ಹೋರಾಟ ಸಮಿತಿಯ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ, ಜಿಲ್ಲಾ ಹೋರಾಟ ಸಮಿತಿ ಉಪಾಧ್ಯಕ್ಷ ಕೆ.ಆರ್.ನಾಯಕ್, ಭುಜಂಗ ಶೆಟ್ಟಿ, ಗೋಪಾಲ ಶೆಟ್ಟಿ, ಎ. ಆರ್.ಶೆಟ್ಟಿ, ದಸ್ತಗಿರಿ ಸಾಹೇಬ್, ಎನ್.ಮಹೇಶ್ ಗಾಣಿಗ ಹಿಲ್ಕೋಡು, ನವಿನಚಂದ್ರ ಶೆಟ್ಟಿ ಕಾಡೂರು, ಚಂದ್ರಶೇಖರ ಆಚಾರ್, ಓಂ ಗುರು ಬಸ್ರೂರು, ಫಾಜಲ್ ನೇರಳಕಟ್ಟೆ, ಸಮಿತಿಯ ಕಾನೂನು ಸಲಹೆಗಾರ ನ್ಯಾಯವಾದಿ ಆವರ್ಸೆ ರತ್ನಾಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.


ಮುಂದಿನ ಹಂತವಾಗಿ ಜಿಲ್ಲಾ ಹೋರಾಟ ಸಮಿತಿಯು ಕುಂದಾಪುರ ಹಾಗೂ ಬೈಂದೂರು ಶಾಸಕರನ್ನು ಭೇಟಿಯಾಗುವುದು ಹಾಗೂ ಭಟ್ಕಳಕ್ಕೆ ತೆರಳಿ ಶಾಸಕ ಸುನಿಲ್ ನಾಯ್ಕ್ ಭೇಟಿಯಾಗಲು ಭಟ್ಕಳಕ್ಕೆ ನಿಯೋಗ ನಿಯೋಗ ತೆರಳಲು ನಿರ್ಧರಿಸಲಾಯಿತು.

Related Articles

Stay Connected

21,961FansLike
2,941FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!