23.3 C
New York
Saturday, July 24, 2021

Buy now

spot_img

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ


ಕುಂದಾಪುರ: ಡಾ.ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ; ಬಿ.ಬಿ ಹೆಗ್ಡೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಪ್ರತಿಷ್ಠಿತ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಕರಣಾ ಕಾರ್ಯಕ್ರಮವನ್ನು, ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಲಾಯಿತು.


ಈ ಸಂದರ್ಭದಲ್ಲಿ ಪ್ರಾಂಶುಪಾಲ ಉಮೇಶ್ ಶೆಟ್ಟಿ ಕೊತ್ತಾಡಿಯವರು ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.


ಇಂಗ್ಲಿಷ್ ಉಪನ್ಯಾಸಕಿ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ ಉಪನ್ಯಾಸಕಿ ದೀಕ್ಷಿತಾ ಪ್ರಾರ್ಥನೆಗೈದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸುಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಪ್ರವೀಣಾ ಪೂಜಾರಿ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
2,866FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!