Thursday, November 21, 2024

ರೋಟರಿ ಕ್ಲಬ್ ಅಂಪಾರು: ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಆಯ್ಕೆ

ಗುರುರಾಜ್ ಶೆಟ್ಟಿ


ಕುಂದಾಪುರ: ರೋಟರಿ ಕ್ಲಬ್ ಅಂಪಾರು ಇದರ 2021-22ನೇ ಸಾಲಿನ ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿಯಾಗಿ ಗುರುರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.23 ಶುಕ್ರವಾರ ಸಂಜೆ 6 ಗಂಟೆಗೆ ವಂಡ್ಸೆ ಆತ್ರಾಡಿಯಲ್ಲಿರುವ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.


ಮುಖ್ಯ ಅತಿಥಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಆಗಮಿಸಲಿದ್ದಾರೆ. ಪದಪ್ರದಾನ ಅಧಿಕಾರಿಯಾಗಿ ರೋಟರಿ ವಲಯ 2ರ ಅಸಿಸ್ಟೆಂಟ್ ಗವರ್ನರ್ ಧನಂಜಯ ಪ್ರಭು ಭಾಗವಹಿಸಲಿದ್ದಾರೆ. ರೋಟರಿ ವಲಯ 2ರ ವಲಯ ಲೆಪ್ಟಿನೆಂಟ್ ಗಂಗಾಧರ ಉಡುಪ ಅತಿಥಿಯಾಗಿ ಭಾಗವಹಿಸುವರು. 2020-21ರ ಸಾಲಿನ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಎಂ ಉಪಸ್ಥಿತರಿರಲಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!