Thursday, November 21, 2024

ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಣಿ ಪ್ರಕ್ರಿಯೆ ಆರಂಭ


ಕುಂದಾಪುರ: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ 20 ವರ್ಷಗಳನ್ನು ಪೂರೈಸಿ 21ನೇ ವರ್ಷಕ್ಕೆ ಕಾಲಿಡುತ್ತಿದೆ. ಈ ವರ್ಷ ಮಣಿಪಾಲ್ ಕಾರ್ಡ್ ‘ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ’ ಎಂಬ ಧ್ಯೇಯವಾಕ್ಯದೊಂದಿಗೆ ಇನ್ನಷ್ಟು ವಿಶೇಷ ಸೌಲಭ್ಯ ಯೋಜನೆಯಲ್ಲಿ ಒಳಗೊಂಡಿದೆ. ಈಗಾಗಲೇ 2021ರ ನೋಂದಣಿ ಆರಂಭವಾಗಿದ್ದು, ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಸದಸ್ಯತ್ವ ಪಡೆಯಬಹುದು ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಉಪ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ಹೇಳಿದರು.


ಅವರು ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈ ಯೋಜನೆಯಲ್ಲಿ 1 ವರ್ಷದ ಸದಸ್ಯತ್ವವು ಒಬ್ಬರಿಗೆ ರೂ.300, ಕೌಟುಂಬಿಕ ಕಾರ್ಡ್ ಆಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ.600, ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ-ತಾಯಿ, ಅತ್ತೆ ಮಾವ) ರೂ.750. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ.500, ಕುಟುಂಬಕ್ಕೆ ರೂ.800, ಕುಟುಂಬ ಪ್ಲಸ್ ಯೋಜನೆಗೆ ರೂ.950 ಆಗುತ್ತದೆ ಎಂದರು.


ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಹೊರ ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇ.50 ರಿಯಾಯತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.30 ರಿಯಾಯತಿ ಪಡೆಯಬಹುದು. ಒಳ ರೋಗಿ ವಿಭಾಗದಲ್ಲಿ ಸಾಮಾನ್ಯ ವಾರ್ಡ್‍ನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25 ರಿಯಾಯತಿ ನೀಡಲಾಗುವುದು. ಸಿಟಿ, ಎಂ.ಆರ್.ಐ, ಅಲ್ಟ್ರಾಸೌಂಡ್‍ಗಳಲ್ಲಿ ಶೇ.20 ರಿಯಾಯತಿ, ಹೊರರೋಗಿ ವಿಭಾಗದಲ್ಲಿ ಮತ್ತು ಮಧುಮೇಹ, ಪಾದ ತಪಾಸಣೆಯಲ್ಲಿ ಶೇ.20 ರಿಯಾಯಿತಿ, ಔಷಧಾಲಯಗಳಲ್ಲಿ ಶೇ.12ರ ವರೆಗೆ ರಿಯಾಯತಿ ಇರುತ್ತದೆ. ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್‍ನಲ್ಲಿ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇ.10 ರಿಯಾಯತಿ ದೊರೆಯುತ್ತದೆ ಎಂದರು.


ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ .ಪೈ ಆಸ್ಪತ್ರೆ ಉಡುಪಿ, ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು, ದುರ್ಗಾ ಸಂಜೀವಿನಿ ಮಣಿಪಾಲ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ್ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಈ ಕಾರ್ಡನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದರು.

ಮಣಿಪಾಲ ಆರೋಗ್ಯ ಕಾರ್ಡ್‍ನ ಪ್ರತಿನಿಧಿಯಾಗಬೇಕಾದಲ್ಲಿ ಅಕ್ಷಯ್ ಕುಮಾರ್ (ಮೊ: 9740891816) ಇವರನ್ನು ಸಂಪರ್ಕಿಸಬಹುದು.

ಕಾರ್ಡ್ ನೋಂದಣಿಗೆ ಸಂಪರ್ಕಿಸಿ:

2021ರ ನೋಂದಾವಣಿಗಾಗಿ ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ ಅಥವಾ ಅಧಿಕೃತ ಪ್ರತಿನಿಧಿಗಳಾದ ಕುಂದಾಪುರ: ನಾಗರಾಜ್ ಖಾರ್ವಿ-9916888916, ರಕ್ಷಿತ್ ಕುಮಾರ್-9743366746, ಸುರೇಖಾ ಪೈ ಕೋಟ-9880374926, ಕೋಟ ಸಹಕಾರಿ ವ್ಯವಸಾಯಕ ಸಂಘ-8453364342, ಭದ್ರಯ್ಯ-9448872666, ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್-8884459066 ಇವರನ್ನು ಸಂಪರ್ಕಿಸಬಹುದಾಗಿದೆ.


ಈ ಸಂದರ್ಭದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹಿರಿಯ ವ್ಯವಸ್ಥಾಪಕ ಕೆ.ಸಚಿನ್ ಕಾರಂತ್ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅವರಿಗೆ ಮಣಿಪಾಲ್ ಕಾರ್ಡನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್‍ನ ಜಾನ್ಸನ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!