spot_img
Tuesday, March 24, 2026
spot_img

ರೋಟರಿ ಕ್ಲಬ್ ಅಂಪಾರು: ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ: ಮನುಷ್ಯನೋರ್ವ ತನ್ನ ಸೇವಾಕಾರ್ಯಗಳ ಮೂಲಕ ಈ ಜಗತ್ತಿನಲ್ಲಿ ಶಾಶ್ವತವಾಗಿ ಉಳಿಯಬಲ್ಲ, ಸೇವಾಮನೋಭಾವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು.


ಅವರು ವಂಡ್ಸೆ ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಅಂಪಾರು ಇದರ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಅಂಪಾರು ರೋಟರಿ ಕ್ಲಬ್ ನೂತನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಸಹಾಯಕ ರಾಜ್ಯಪಾಲ ಧನಂಜಯ ಪ್ರಭು ಅವರು ನೂತನ ಪದಾಧಿಕಾರಿಗಳ ಪದಪ್ರದಾನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಸಂಸ್ಥೆಯ ಕೈಪಿಡಿ ದರ್ಪಣವನ್ನು ವಲಯ ಸೇನಾನಿ ಗಂಗಾಧರ ಉಡುಪ ಶಂಕರನಾರಾಯಣ ಬಿಡುಗಡೆ ಮಾಡಿದರು.


ಅಂಪಾರು ರೋಟರಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಶೆಟ್ಟಿ ಮೂಡುಬಗೆ, ನಿಕಟಪೂರ್ವ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಎಲ್.ಆರ್.ಎಂ ಘಟಕ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದ್ದು ರಾಷ್ಟ್ರಾದ್ಯಂತ ಇತರ ಗ್ರಾಮ ಪಂಚಾಯತಿಗಳಿಗೆ ಪ್ರೇರಣೆಯಾದ ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಹಾಗೂ ರಕ್ತದಾನಿ, ಕರೋನಾ ಫ್ರಂಟ್‌ಲೈನ್ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ ನೆಂಪು ಅವರನ್ನು ಸನ್ಮಾನಿಸಲಾಯಿತು.

ಅಂಪಾರು ರೋಟರಿ ಕ್ಲಬ್‌ಗೆ ನೂತನ ಸದಸ್ಯರಾಗಿ ಸೇರ್ಪಡೆಗೊಂಡ ನಿವೃತ್ತ ಪ್ರೌಢಶಾಲಾ ಶಿಕ್ಷಕ ನರಸಿಂಹ ನಾಯ್ಕ, ನಿವೃತ್ತ ಮುಖ್ಯೋಪಾಧ್ಯಾಯ ನರಸಿಂಹ ನಾಯ್ಕ ಮೂಡುಬಗೆ ಇವರನ್ನು ಬರಮಾಡಿಕೊಳ್ಳಲಾಯಿತು.
ಶಿಕ್ಷಕ ಆನಂದ ಸ್ವಾಗತಿಸಿ, ದಿನೇಶ್ ಪೂಜಾರಿ ಗೊರಟೆ ಪ್ರಾರ್ಥನೆಗೈದು, ನತನ ಕಾರ್ಯದರ್ಶಿ ಗುರುರಾಜ್ ಶೆಟ್ಟಿ ವಂದಿಸಿದರು. ನಾಗರಾಜ್ ಪುತ್ರನ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!