Thursday, November 21, 2024

ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕುಂದಾಪುರ. ಆ.27: ಕ್ರೀಡೆಗಳಲ್ಲಿನ ವಿದ್ಯಾರ್ಥಿಗಳ ಆಸಕ್ತಿ ನಾಯಕತ್ವ ಗುಣವನ್ನು ಬೆಳೆಸುತ್ತದೆ. ಬದುಕಿನಲ್ಲಿ ಕ್ರೀಡಾ ಸ್ಪೂರ್ತಿ ಇದ್ದರೆ ಧೈರ್ಯಗೆಡದೆ ಕನಸುಗಳನ್ನು ಸಾಧಿಸಬಹುದು. ಹೀಗೆ ಆರಂಭಿಕ ಹಂತದ ಕ್ರೀಡಾ ಪ್ರೋತ್ಸಾಹಗಳ ಮೂಲಕ ಒಲಿಂಪಿಕ್ಸ್‌ನಂತಹ ಮಟ್ಟಕ್ಕೆ ಏರುವಂತಾಗಲಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅವರು ಶುಭ ಹಾರೈಸಿದರು.

ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಪ್ರೊ.ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ಶ್ರೇಷ್ಠ ಹಾಕಿ ಆಟಗಾರ ಧ್ಯಾನ್‌ಚಂದ್ ಅವರ ಸವಿನೆನಪಿಗಾಗಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ. ಈ ಬಾರಿ ಹಾಕಿ ಕ್ರೀಡೆಯಲ್ಲಿ ಭಾರತ ಶ್ರೇಷ್ಠಮಟ್ಟದ ಪ್ರದರ್ಶನ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು ಎಂದರು. ಉಪಪ್ರಾಂಶುಪಾಲ ಕೋವಾಡಿ ಚೇತನ್ ಶೆಟ್ಟಿ ಹಾಗೂ ಕಾಲೇಜಿನ ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸುಪ್ರೀತಾ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!