spot_img
Wednesday, January 22, 2025
spot_img

ಸರಕಾರದ ಸುತ್ತೋಲೆಯಂತೆ ಧಾರ್ಮಿಕ ಆಚರಣೆ-ಹಟ್ಟಿಯಂಗಡಿಯಲ್ಲಿ ಸಚಿವ ಸುನಿಲ್ ಕುಮಾರ್


ಕುಂದಾಪುರ: ಧಾರ್ಮಿಕ ಆಚರಣೆಯನ್ನು ನಡೆಸುವ ಬಗ್ಗೆ ಸರಕಾರಕ್ಕೆ ಭಿನ್ನಾಭಿಪ್ರಾಯವಿಲ್ಲ. ಆದರೆ ಆಚರಣೆಯ ಜೊತೆಗೆ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ಅನಿವಾರ್ಯತೆಯಿದೆ. ಸರಕಾರದ ಸುತ್ತೋಲೆಯಂತೆ ಧಾರ್ಮಿಕ ವಿಧಿವಿಧಾನಗಳಿಗೆ ಚ್ಯುತಿಯಾಗದಂತೆ ಆಚರಣೆ ನಡೆಸಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.


ಅವರು ಸೋಮವಾರ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.


ಕಳೆದ ಬಾರಿ ಕೋವಿಡ್ ಸಂದರ್ಭ ಯಕ್ಷಗಾನ ಕಲಾವಿದರಿಗೆ ಗೌರವಧನ ನೀಡಲಾಗಿತ್ತು. ಈ ಬಾರಿಯೂ ಸರಕಾರದ ಮುಂದೆ ಚಿಂತನೆಯಿದ್ದು ಬೆಂಗಳೂರಿಗೆ ತೆರಳಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತದೆ. ಯಕ್ಷಗಾನ ಮಾತ್ರವಲ್ಲ ಎಲ್ಲಾ ಅಕಾಡೆಮಿಗಳಿಗೆ ಹೊಸತನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದರು.


ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ ಸಚಿವರನ್ನು ಬರಮಾಡಿಕೊಂಡರು. ಈ ಸಂದರ್ಭ ತಾ.ಪಂ ಮಾಜಿ ಸದಸ್ಯ ಕರಣ ಪೂಜಾರಿ, ಹಟ್ಟಿಯಂಗಡಿ ಗ್ರಾ.ಪಂ ಅಧ್ಯಕ್ಷೆ ಅಮೃತಾ ಶೆಟ್ಟಿ, ಸದಸ್ಯ ಚಂದ್ರ ಮೊಗವೀರ, ಬಿಜೆಪಿ ಮುಖಂಡರಾದ ಪ್ರಭಾಕರ ಶೆಟ್ಟಿ, ಗುರುರಾಜ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!