21.3 C
New York
Friday, September 17, 2021

Buy now

spot_img

6 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ನಿಂದ ಶೀಘ್ರ ಮುಕ್ತ-ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ


ಗುಜ್ಜಾಡಿ :ಡಾ.ಬಾಬು ಜಗಜೀವನರಾಮ್ ಸಭಾಭವನಕ್ಕೆ ಶಿಲಾನ್ಯಾಸ

ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪುಗೊಳ್ಳುತ್ತಿದ್ದು, ಅನೇಕ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. 94ಸಿ, 94ಸಿಸಿ, 53 ಮತ್ತು 57ರ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ತಹಶೀಲ್ದಾರ್‍ರಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 9 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಎಂದು ಗುರುತಿಸಲಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿ 6 ಲಕ್ಷ ಹೆಕ್ಟೇರ್ ಭೂಮಿಯನ್ನು ತೆರವುಗೊಳಿಸಲು ಸರಕಾರ ಮುಂದಾಗಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.


ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಗುಜ್ಜಾಡಿ ಗ್ರಾಮ ಪಂಚಾಯತ್ ಸಮೀಪ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಾಬು ಜಗಜೀವನರಾಮ್ ಸಭಾಭವನಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.


ಕ್ಷೇತ್ರದ ಎಲ್ಲಾ ಮನೆಗಳಿಗೆ ಶುದ್ಧ ಕುಡಿಯುವ ನೀರು ನೀಡುವ ಸುಮಾರು 500 ಕೋಟಿ ರೂ. ವೆಚ್ಚದ ಯೋಜನೆ ಸದ್ಯದಲ್ಲೇ ಅನುಷ್ಠಾನಗೊಳ್ಳಲಿದೆ. ವಿದ್ಯುತ್ ಸಂಪರ್ಕಕ್ಕೆ ನಿರಾಕ್ಷೇಪಣಾ ಪತ್ರ ಪಡೆಯಲು ಅಲೆಯುವುದನ್ನು ತಪ್ಪಿಸಲು ಪಡಿತರ ಚೀಟಿ ಹೊಂದಿರುವ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಸರಕಾರ ಆದೇಶ ಹೊರಡಿಸಲಿದೆ. ಗುಜ್ಜಾಡಿ ಗ್ರಾಪಂ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.


ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಮಾಜಿ ಸದಸ್ಯ ನಾರಾಯಣ ಕೆ.ಗುಜ್ಜಾಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಣೇಕರ್, ಗುಜ್ಜಾಡಿ ಗ್ರಾಪಂ ಉಪಾಧ್ಯಕ್ಷ ರಾಜು ಪೂಜಾರಿ, ಸದಸ್ಯರಾದ ಹರೀಶ ಮೇಸ್ತ, ಶೇಖರ ದೇವಾಡಿಗ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಶ್ರೀಧರ, ತುಂಗಾ ಪೂಜಾರಿ, ಭಾರತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ ಪೂಜಾರಿ, ಪಿಡಿಒ ಶೋಭಾ, ಕಾರ್ಯದರ್ಶಿ ಶಕುಂತಲಾ, ಗ್ರಾಪಂ ಸದಸ್ಯರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
2,941FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!