21.3 C
New York
Friday, September 17, 2021

Buy now

spot_img

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ


ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ (80) ಅವರು ಸೆಪ್ಟೆಂಬರ್ 13 ನಿಧನರಾದರು.


ಜು.18ರಂದು ಆಸ್ಕರ್ ಫೆರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಮಯದಲ್ಲಿ ಜಾರಿ ಬಿದ್ದಿದ್ದು ತಲೆ ಏಟಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.


1941 ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ದಿಲ್ಲಿಯಲ್ಲಿ ನಂತರ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ ಆಸ್ಕರ್ ಫರ್ನಾಂಡಿಸ್ ಅವರು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಆಸ್ಕರ್ ಫರ್ನಾಂಡಿಸ್ ಕಾರ್ಯ ನಿರ್ವಹಿಸಿದ್ದರು. 2016ರ ಜುಲೈನಲ್ಲಿ ನಾಲ್ಕನೇ ಬಾರಿಗೆ ಆಯ್ಕೆಯಾದ ಇವರ ಸದಸ್ಯತ್ವ ಅವಧಿ 2022ರ ಜೂ.30ರವರೆಗೆ ಇತ್ತು.


ಆಸ್ಕರ್ ಫೆರ್ನಾಂಡಿಸ್ ಅವರು ಪತ್ನಿ ಬ್ಲೋಸಮ್ ಫೆರ್ನಾಂಡಿಸ್, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
2,941FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!