14.9 C
New York
Tuesday, December 7, 2021

Buy now

spot_img

ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ಸಿ.ಎ., ಸಿ.ಎಸ್ ಕೋರ್ಸ್‌ಗಳ ಮಾಹಿತಿ ಕಾರ್ಯಾಗಾರ

ಕುಂದಾಪುರ: ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇಲ್ಲಿ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ.ಎ., ಸಿ.ಎಸ್ ಕೋರ್ಸ್‌ಗಳ ಕುರಿತು ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.


ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಿ.ಎ.ನಾಗೇಂದ್ರ ಭಕ್ತ ಹೆಬ್ರಿ ಹಾಗೂ ಸಿ.ಎಸ್.ಸಂತೋಷ ಪ್ರಭು ಉಡುಪಿ ಇವರು ಕೋರ್ಸ್ ಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು.


ಕಾಲೇಜಿನ ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲರು ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಹರ್ಷ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,046FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!