spot_img
Tuesday, March 24, 2026
spot_img

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ


ಕುಂದಾಪುರ: ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ವತಿಯಿಂದ ಎಸ್ ಎಂ ಗೋಪಾಲಕೃಷ್ಣ ಬೆಳ್ಳಾರೆ ಮತ್ತು ಪೈ ಟೆಕ್ಸ್ ಟೈಲ್ಸ್ ಮತ್ತು ಪೈ ಗಾರ್ಮೆಂಟ್ಸ್ ಗಂಗೊಳ್ಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ನನ್ನ ಪ್ರೇರಣೆಯ ಶ್ರೀಕೃಷ್ಣ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.


ಹಾಲಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಿವಾನಿ ಬಿ ಶೆಟ್ಟಿ ಮತ್ತು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ರಾಜೀವ್ ಕುಲಾಲ್ ಜಂಟಿಯಾಗಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಲಕ್ಷ್ಮಿ ಮತ್ತು ಕಾಪುವಿನ ದಂಡತೀರ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಖಿತಾ ಆರ್ ಐತಾಳ್ ಜಂಟಿಯಾಗಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.


ವಿಜೇತರಿಗೆ ನಗದು ಬಹುಮಾನವನ್ನು ಮತ್ತು ಭಾಗವಹಿಸಿದ ಎಲ್ಲರಿಗೂ ಕೂಡ ಡಿಜಿಟಲ್ ಸರ್ಟಿಫಿಕೇಟನ್ನು ಆನ್ಲೈನ್ ಮೂಲಕ ವಿತರಿಸಲಾಗಿದೆ ಎಂದು ಸಂಜೀವ ಪಾರ್ವತಿ ಪ್ರಕಾಶನ ಸಂಸ್ಥೆಯ ನಿರ್ವಾಹಕರಾದ ನರೇಂದ್ರ ಎಸ್ ಗಂಗೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!