spot_img
Wednesday, March 25, 2026
spot_img

ಬೈಂದೂರು: ವಿಶ್ವಕರ್ಮ ಜಯಂತಿ ಆಚರಣೆ

ಬೈಂದೂರು: ವಿಶ್ವಕರ್ಮನು ಪಂಚಬ್ರಹ್ಮರ ಮೂಲಕ, ಲೋಕಕ್ಕೆ ಪಂಚಶಿಲ್ಪ ಕಾರ್ಯಗಳ ಮೂಲಕ ಸೃಷ್ಟಿಯಲ್ಲಿ ಸೃಜನಶೀಲತೆ ನಿರಂತರವಾಗಿ ನಡೆಯುತ್ತಿರುವಂತೆ ನೋಡಿಕೊಂಡವನು. ಇಡೀ ವಿಶ್ವವೇ ವಿಶ್ವಕರ್ಮನಿಗೆ ಋಣಿಯಾಗಿದ್ದೇವೆ ಎಂದು ಬೈಂದೂರು ತಾಲೂಕು ತಹಶೀಲ್ದಾರ್ ಶೋಭಾಲಕ್ಷ್ಮೀ ಹೇಳಿದರು.


ಅವರು ಶುಕ್ರವಾರ ಬೈಂದೂರು ತಾಲೂಕು ತಹಶೀಲ್ದಾರ್ ಕಛೇರಿಯಲ್ಲಿ ಸರ್ಕಾರದ ಆದೇಶದಂತೆ ಸರಳವಾಗಿ ವಿಶ್ವಕರ್ಮ ಜಯಂತಿ ಆಚರಿಸಿ, ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ,ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಅದೇ ರೀತಿ ಸಮುದಾಯದ ಮೂಲಕ ಪಂಚ ಕಸಬನ್ನು ಇನ್ನೂ ಅತ್ಯಂತ ಜನಪ್ರಿಯಗೊಳಿಸಲು ಮತ್ತು ಕಲಾ ಕೌಶ್ಯಲಗಳನ್ನು ಮುಂದಿನ ಪೀಳಿಗೆಗೆ ನೀಡುವಂತಾಗಬೇಕು ಹಾಗೂ ಈ ಸಮಾಜವರು ಶಿಸ್ತು ಸಂಯಮ ತಾಳ್ಮೆ ಜಾಣತನ, ಸಾಮಾಜಿಕ ಬದ್ದತೆಯನ್ನು ರೂಢಿಸಿಕೊಂಡು ಬಂದಿದ್ದಾರೆ ಎಂದರು.


ವಿಶ್ವಕರ್ಮ ಭಾವಚಿತ್ರವನ್ನು ಬೈಂದೂರು ವಿಶ್ವಕರ್ಮ ಯುವ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಕಛೇರಿಗೆ ಕೊಡುಗೆಯಾಗಿ ನೀಡಿದ್ದಾರೆ.


ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಲತಾ ಶೆಟ್ಟಿ, ಯಡ್ತರೆ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ ಬಿಲ್ಲವ, ವಿಶ್ವಕರ್ಮ ಯುವ ಸಂಘದ ಪದಾಧಿಕಾರಿಗಳಾದ ನಾಗೇಂದ್ರ ಆಚಾರ್, ನಾಗರಾಜ್ ಆಚಾರ್ ಬಂಕೇಶ್ವರ, ಶೇಷಗಿರಿ ಆಚಾರ್ ಯೋಜನಾನಗರ, ಶ್ರೀಧರ್ ಆಚಾರ್ ಪಡುವರಿ, ಸಂತೋಷ್ ಆಚಾರ್ ಬಿಜೂರು, ಸುಕೇಶ್ ಆಚಾರ್ ಹೇರಂಜಾಲು, ಹರೆಗೋಡು ಸುಮಂತ್ ಆಚಾರ್, ಪತ್ರಕರ್ತ ಹರೆಗೋಡು ಸುಶಾಂತ್ ಆಚಾರ್ ಹಾಗೂ ಬೈಂದೂರು ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!