spot_img
Wednesday, March 25, 2026
spot_img

ಬೈಂದೂರು ಕ್ಷೇತ್ರಕ್ಕೆ ಆಸ್ಕರ್ ಕೊಡುಗೆ ಅಪಾರ-ಕೆ. ಗೋಪಾಲ ಪೂಜಾರಿ


ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಆಸ್ಕರ್ ಫೆರ್ನಾಂಡೀಸ್ ಸಾಕಷ್ಟು ಸಹಕಾರ ನೀಡಿದ್ದರು. ಬೈಂದೂರು ಕ್ಷೇತ್ರವನ್ನು ಮಾದರಿಯನ್ನಾಗಿಸುವಲ್ಲಿ ಆಸ್ಕರ್ ಅವರ ಶ್ರಮವೂ ಅಪಾರವಾದುದು. ಪಕ್ಷ ಸಂಘಟನೆ ಹಾಗೂ ಯುವ ನಾಯಕರನ್ನು ಹುಟ್ಟುಹಾಕಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅಜಾತ ಶತ್ರುವಿನಂತೆ ಬದುಕಿದ್ದು, ಅವರೋರ್ವ ಪಕ್ಷಾತೀತವಾಗಿ ಎಲ್ಲರೂ ಮೆಚ್ಚುವ ನಾಯಕನಾಗಿದ್ದರು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.


ಅವರು ಸೋಮವಾರ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ದಿ| ಆಸ್ಕರ್ ಫೆರ್ನಾಂಡೀಸ್ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದರು.


ಕಾಂಗ್ರೆಸ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ, ಈ ನಾಡು ಕಂಡ ಅಪರೂಪದ ರಾಜಕಾರಣಿ‌ಆಸ್ಕರ್ ಅವರು ಬೈಂದೂರಿನಲ್ಲಿ ಹಿಂದೆ ಉಡ್ಡಯನ ಕೇಂದ್ರವಾಗುತ್ತಿರುವುದಕ್ಕೆ ಜನರ ವಿರೋಧಕ್ಕೆ ಮನ್ನಣೆ ನೀಡಿ, ಅದನ್ನು ಬೇರೆಡೆ ಸ್ಥಳಾಂತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನುವುದನ್ನು ಸ್ಮರಿಸಿಕೊಂಡರು.


ಸಭೆಯಲ್ಲಿ ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ವಾಸುದೇವ ಯಡಿಯಾಳ್, ರಘುರಾಮ್ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು, ಸಂತೋಷ್ ಶೆಟ್ಟಿ ಹಕ್ಲಾಡಿ, ನಾಗರಾಜ ಗಾಣಿಗ, ಶೇಖರ್ ಪೂಜಾರಿ, ಮತ್ತಿತರರು ನುಡಿನಮನ ಸಲ್ಲಿಸಿದರು.


ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ ಕುಮಾರ್ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!