16.1 C
New York
Friday, October 22, 2021

Buy now

spot_img

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಅಧ್ಯಕ್ಷರಾಗಿ ಲೋಹಿತಾಶ್ವ ಆರ್ ಕುಂದರ್ ಆಯ್ಕೆ

ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ 2021-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಹಿತಾಶ್ವ ಆರ್.ಕುಂದರ್ ಬಾಳಿಕೆರೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಕೋಶಾಧಿಕಾರಿಯಾಗಿ ದಿನೇಶ್ ಕಾಂಚನ್ ಬಾಳಿಕೆರೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಚಂದ್ರಶೇಖರ ಪಡುಕೋಣೆ, ಜೊತೆ ಕಾರ್ಯದರ್ಶಿಯಾಗಿ ಜಗದೀಶ್ ನೆಂಪು ಆಯ್ಕೆಯಾದರು.

ಅ.3ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ನಡೆದ ಹೆಮ್ಮಾಡಿ ಘಟಕದ ವಾರ್ಷಿಕ ಮಹಾಸಭೆ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಶಿವರಾಮ ಕೋಟ ಸಭೆಯನ್ನು ಉದ್ಘಾಟಿಸಿದರು. ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ಪ್ರಭಾಕರ ಸೇನಾಪುರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘಟನೆಯ ಕಾರ್ಯದರ್ಶಿ ಕಾರ್ಯದರ್ಶಿ ರಾಜೇಂದ್ರ ಹಿರಿಯಡ್ಕ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಅಧ್ಯಕ್ಷ ಕೆ.ಕೆ ಕಾಂಚನ್, ಮಾಜಿ ಅಧ್ಯಕ್ಷ ಎಮ್.ಎಮ್.ಸುವರ್ಣ, ಹೆಮ್ಮಾಡಿ ಘಟಕದ ಮಾಜಿ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ, ರಾಜು ಶ್ರೀಯಾನ್, ಉಚ್ಚಿಲ ಮಹಾಲಕ್ಷ್ಮೀ ದೇವಳದ ಸ್ವರ್ಣ ಕಲಶ ಸಮಿತಿ ಕುಂದಾಪುರ ವಲಯದ ಕಾರ್ಯದರ್ಶಿ ಜಗದೀಶ ಮಾರ್ಕೋಡು, ಮೊಗವೀರ ಸ್ತ್ರೀಶಕ್ತಿ ಸಂಘದ ಬಗ್ವಾಡಿಯ ಅಧ್ಯಕ್ಷೆ ಸುಮಿತ್ರಾ ಆನಂದ ಮೊಗವೀರ ಉಪಸ್ಥಿತರಿದ್ದರು.


Related Articles

Stay Connected

21,961FansLike
2,988FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!