16.1 C
New York
Friday, October 22, 2021

Buy now

spot_img

ಕೃಷಿ ಪ್ರದೇಶದ ವಿಸ್ತರಣೆ ಆಗಬೇಕು- ಸಚಿವ ಸುನಿಲ್ ಕುಮಾರ್

ಬ್ರಹ್ಮಾವರ: ಕೃಷಿ ಮಹೋತ್ಸವ -2021 ಉದ್ಘಾಟನೆ
ಬ್ರಹ್ಮಾವರ: ಇತ್ತೀಚಿನ ದಿನಗಳಲ್ಲಿ ಜನತೆಗೆ ಕೃಷಿ ಕ್ಷೇತ್ರದ ಮೇಲೆ ಆಸಕ್ತಿ ಹೆಚ್ಚಾಗುತ್ತಿದ್ದು,ಇದು ಒಳ್ಳೆಯ ಬೆಳವಣಿಗೆ ಇದರೊಂದಿಗೆ ಕೃಷಿ ಪ್ರದೇಶದ ವಿಸ್ತರಣೆ ಕೂಡಾ ಆಗಬೇಕು ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ,ಬ್ರಹ್ಮಾವರ ಮತ್ತು ಉಳ್ಳಾಲ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ, ಬ್ರಹ್ಮಾವರ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಉಡುಪಿ ಮತ್ತು ದಕ್ಷಿಣ ಕನ್ನಡ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ),ಉಡುಪಿ ಇವರ ಸಹಯೋಗದೊಂದಿಗೆ ಕೃಷಿ ಮಹೋತ್ಸವ -೨೦೨೧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿ ಚಟುವಟಿಕೆಗಳಿಗೆ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಆಸಕ್ತಿ, ಮತ್ತು ಕುತೂಹಲ ನಿರ್ಮಾಣವಾಗಿದೆ. ಕೊರೊನಾದಿಂದಾಗಿ ಬೇರೆ ಎಲ್ಲಾ ಕ್ಷೇತ್ರಗಳಿಗೆ ನಷ್ಟ ಆಗಿದ್ದನ್ನು ನೋಡಿರಬಹುದು. ಆದರೆ ಕೃಷಿ ಕ್ಷೇತ್ರ ತನ್ನ ವ್ಯಾಪಕತೆಯನ್ನು ವಿಸ್ತರಿಕೊಂಡಿದ್ದು, ಹೆಚ್ಚು ಜನ ಕೃಷಿಯಕಡೆಗೆ ಆಕರ್ಷಿತರಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಶೇ.೭ ರಷ್ಟು ಹೆಚ್ಚು ಭಿತ್ತನೆ ನಡೆದಿದೆ. ಕಾರ್ಕಳ ಕಜೆ ತಳಿಯ ಕುರಿತಂತೆ ೧.೫ ವರ್ಷದಿಂದ ಸಂಶೋಧನೆಗಳು ನಡೆಯುತ್ತಿದ್ದು, ಈ ತಳಿಯ ತಾಂತ್ರಿಕ ತೊಡಕುಗಳನ್ನು ನಿವಾರಿಸಿ,ಶೀಘ್ರದಲ್ಲಿ ಇದನ್ನು ಅಧಿಕೃತವಾಗಿ ಕೃಷಿ ಇಲಾಖೆಗೆ ಸೇರ್ಪಡೆಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಮುಖ್ಯಮಂತ್ರಿಗಳು ಹಾಗೂ ಕೃಷಿ ಸಚಿವರೊಂದಿಗೆ ಚರ್ಚಿಸಿರುವುದಾಗಿ ಹೇಳಿದ ಸಚಿವರು, ಕಾಲೇಜು ಆರಂಭದಿಂದ ಈ ಪ್ರದೇಶದಲ್ಲಿ ಕೃಷಿಗೆ ಇನ್ನಷ್ಟು ಪ್ರೋತ್ಸಾಹ ದೊರೆಯಲಿದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯಮಶೀಲತೆ ಆಗುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಸಹ್ಯಾದ್ರಿ ಬ್ರಹ್ಮ,ಸಹ್ಯಾದ್ರಿ ಪಂಚಮುಖಿ,ಕಜೆ ೨೫-೯ ತಳಿಗಳನ್ನು ಸಚಿವರು ಬಿಡುಗಡೆಗೊಳಿಸಿದರು.
ಭತ್ತದ ಕೃಷಿಯಲ್ಲಿ ಯಾಂತ್ರಿಕತೆ ಬಳಸಿಕೊಂಡ ಯಶಸ್ವಿ ರೈತರನ್ನು ಸನ್ಮಾನಿಸಲಾಯಿತು.
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿU ಡಾ.ಎಂ.ಕೆ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಸಮುದಾಯಕ್ಕೆ ಕೃಷಿ ಉತ್ಪನ್ನಗಳ ಮೂಲದ ಬಗೆಗಿನ ಅರಿವಿನ ಕೊರತೆಯಿದೆ. ಕೃಷಿ ಬಗ್ಗೆ ಅರಿವು ಮೂಡಿಸುವ ಕೆಲಸ ವಿದ್ಯಾರ್ಥಿ ಜೀವನದಲ್ಲಿಯೇ ಆಗಬೇಕು. ಎಂದರು

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳಾದ ದೊಡ್ಡೇಗೌಡ ಸಿ ಪಾಟೀಲ್, ವೀರಭದ್ರಪ್ಪ ಪೂಜಾರಿ, ಬಿ.ಶಿವರಾಮ್, ಕೆ ನಾಗರಾಜ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಶಂಕರ್ ಶೆಟ್ಟಿ ಮತ್ತು ಕೃಷಿ ಮತ್ತು ತೋಟಗಾರಿಕೆ ವಿವಿಯ ಶಿಕ್ಷಣ ನಿರ್ದೇಶಕ ಎಂ ಹನುಮಂತಪ್ಪ, ಆಡಳಿತಾಧಿಕಾರಿ ಜಿ.ಕೆ. ಗಿರಿಜೇಶ್, ಸಂಶೋಧನಾ ನಿರ್ದೇಶಕ ಡಾ.ಮೃತ್ಯುಂಜಯ ಸಿ. ವಾಲಿ, ವಿದ್ಯಾರ್ಥಿ ಕಲ್ಯಾಣದ ಡೀನ್ ಡಾ ಎನ್ ಶಿವಶಂಕರ್,ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ್‌ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ಧರು.

ಸಹ ಸಂಶೋಧನಾ ನಿರ್ದೇಶಕಡಾ. ಲಕ್ಷ್ಮಣ ಸ್ವಾಗತಿಸಿ, ಹಿರಿಯ ಕ್ಷೇತ್ರ ಅಧೀಕ್ಷಕಡಾ.ಶಂಕರ್ ಎಂ ನಿರೂಪಿಸಿ, ಹಿರಿಯ ವಿಜ್ಞಾನಿ ಡಾ. ಧನಂಜಯ ಬಿ ವಂದಿಸಿದರು.

Related Articles

Stay Connected

21,961FansLike
2,988FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!