spot_img
Friday, March 27, 2026
spot_img

ಕಾರ್ಕಡ ಗೆಳೆಯರ ಬಳಗ: ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ, ಕಾರಂತ ಪುರಸ್ಕಾರ ಪ್ರದಾನ


ಕೋಟ: ಕಾರಂತರು ವಿಶ್ವಮಾನ್ಯರು. ಅವರ ವ್ಯಕ್ತಿತ್ವ ನಮ್ಮ ಮಕ್ಕಳಲ್ಲಿ ಮೂಡಿಸುವ ಪ್ರಯತ್ನವಾಗುವುದರೊಂದಿಗೆ, ಕಾರಂತರನ್ನು ಮುಂದಿನ ಪೀಳಿಗೆಗೆ ನೆನಪಿಸುವಂತಹ ಕಾರ್ಯವನ್ನು ಸರ್ಕಾರ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಭಿಪ್ರಾಯ ಪಟ್ಟರು.

ಸಾಲಿಗ್ರಾಮ ಕಾರ್ಕಡ ಗೆಳೆಯರ ಬಳಗದ ವತಿಯಿಂದ ಡಾ.ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ, ಗಾನ ನಮನ ಸಂಸ್ಮರಣೆ, ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಕಾರಂತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ‌ ಆರಾಧನಾ ಕ್ಷೇತ್ರಗಳು ಮತ್ತು ಸಾಂಸ್ಕೃತಿಕ ತಾಣಗಳು ಸ್ಥಳೀಯ ವ್ಯವಸ್ಥೆಗಳ ಅಡಿಯಲ್ಲೇ, ಸರ್ಕಾರದ ಮೇಲುಸ್ತುವಾರಿಯಲ್ಲಿ ಇದ್ದಾಗ ಅದು ಜನಸಾಮಾನ್ಯರ ಕಾರ್ಯಕ್ರಮ ಆಗುತ್ತದೆ. ಯಾವುದೂ ಶಕ್ತಿಯ ಪ್ರದರ್ಶನವಾಗಬಾರದು. ಕಾರಂತರು ಇದ್ದಿದ್ದರೆ ಈ ಬಗ್ಗೆ ಅವರ ಧ್ವನಿ ಗಟ್ಟಿಯಾಗುತ್ತಿತ್ತು ಎಂದು ಹೇಳಿದರು.

ಹಿರಿಯ ಸಾಹಿತಿ ಕುಂದಾಪುರದ ಎ.ಎಸ್.ಎನ್.ಹೆಬ್ಬಾರ್ ಕಾರಂತ ಸಂಸ್ಮರಣೆ ಮಾಡಿದರು.
ಇದೇ ಸಂದರ್ಭ ಕಾರಂತರ ಒಡನಾಡಿ ಪಾಂಡೇಶ್ವರ ಚಂದ್ರಶೇಖರ ಚಡಗ ಅವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಿ ಗೌರವಿಸಲಾಯಿತು.

ಇದಕ್ಕೂ ಮುನ್ನ ಕಾರ್ಯಕ್ರಮವನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ಮಂಗಳೂರಿನ ಸಾಹಿತಿ ಎಚ್.ಜನಾರ್ಧನ ಹಂದೆ, ಕ.ಸಾ.ಪ ಮಾಜಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೋಟ ಸಿ.ಎ ಬ್ಯಾಂಕ್‌ನ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಉಪಸ್ಥಿತರಿದ್ದರು.

ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಚಂದ್ರಕಾಂತ ನಾಯರಿ ವಂದಿಸಿದರು. ಉಪಾಧ್ಯಕ್ಷ ಕೆ.ಶಶಿಧರ ಮಯ್ಯ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!