spot_img
Wednesday, April 1, 2026
spot_img

ಸ.ಹಿ.ಪ್ರಾ. ಶಾಲೆ ಬೈಲೂರು: ಶಾಲಾ ತರಗತಿ ಕೋಣೆ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ

ಕುಂದಾಪುರ, ಅ.22: ಕುಂದಾಪುರ ಶೈಕ್ಷಣಿಕ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿಗೆ ಅಂದಾಜು ರೂ. 21 ಲಕ್ಷ ಮೊತ್ತದಲ್ಲಿ ಎರಡು ತರಗತಿ ಕೋಣೆ ಮಂಜೂರಾಗಿದ್ದು ಕಾಮಗಾರಿಯ ಗುದ್ದಲಿ ಪೂಜೆಯನ್ನು ಬೈಂದೂರು ಕ್ಷೇತ್ರದ ಶಾಸಕ ಬಿ ಎಮ್ ಸುಕುಮಾರ ಶೆಟ್ಟಿ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು, ಕರೋನಾ ಕಾರಣದಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಿ ಕಲಿಕೆಯ ಸುಧಾರಣೆಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಡಿ ಎಸ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶಂಕರನಾರಾಯಣ ಭಟ್ ಕೊಂಡಳ್ಳಿ, ಉಮೇಶ ಶೆಟ್ಟಿ ಕಲ್ಲುಗದ್ದೆ, ವತ್ಸಲಾ ಶೆಟ್ಟಿ ಬೈಲೂರು, ಲಕ್ಷ್ಮೀ, ಜಯಶೀಲಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಮೂಡುಬೈಲೂರು, ಉಪಾಧ್ಯ್ಯಕ್ಷ ಆಶಾಲತಾ ಶಿವರಾಮ ಶೆಟ್ಟಿ ಮೂಡುಬೈಲೂರು, ಎಸ್ ಡಿ ಎಮ್ ಸಿ ಅಧ್ಯಕ್ಷ ಸಂತೋಷ ಕುಮಾರ, ಶಂಕರನಾರಾಯಣ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಸಚ್ಚಿದಾನಂದ ವೈದ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಸದಾನಂದ ಬೈಂದೂರು, ಸಮೂಹ ಸಂಪನ್ಮೂಲ ವ್ಯಕ್ತಿ ರಾಘವೇಂದ್ರರ ಉಪಸ್ಥಿತರಿದ್ದರು.

ಸ್ಥಳೀಯ ಪರೋಹಿತರಾದ ಸುಬ್ರಮಣ್ಯ ಐತಾಳರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ ಪ್ರಸ್ತಾವನೆಗೈದರು. ಸಹಶಿಕ್ಷಕ ಸಂತೋಷ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕ ಆನಂದ ಕುಲಾಲ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!