Sunday, September 8, 2024

ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಮಂಗಳೂರು ವಿ.ವಿ.ಯಿಂದ ಡಾಕ್ಟರೇಟ್ ಪದವಿ

ಕುಂದಾಪುರ: ಉಡುಪಿಯ ಕಲ್ಯಾಣಪುರದ ಪದವಿ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಕುಂದಾಪುರ ಪರಿಸರದ ದೈವಾರಾಧನೆ ಎನ್ನುವ ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಎಸ್. ವಿ. ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಅಭಯ್ ಕುಮಾರ್ ಕೆ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಸಂಶೋಧನಾ ಪ್ರೌಢ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್. ಡಿ ಪದವಿ ನೀಡಿ ಗೌರವಿಸಿದೆ. ಇವರು 2011ರಲ್ಲಿ ವೈದೇಹಿ ಕಥೆಗಳಲ್ಲಿ ಅನಾವರಣಗೊಂಡ ಪ್ರಾದೇಶಿಕ ಸಂಸ್ಕೃತಿ ಎಂಬ ವಿಷಯದ ಕುರಿತು ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಲೋಲಾಕ್ಷಿ ಎನ್.ಕೆ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಕ್ಕೆ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿ ಪಡೆದುಕೊಂಡಿರುತ್ತಾರೆ. ಅಲ್ಲದೆ 2014ರಲ್ಲಿ ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಅನುದಾನದಲ್ಲಿ ಕುಂದ ಜಾನಪದ ಸಾಹಿತ್ಯದಲ್ಲಿ ಪ್ರಾದೇಶಿಕ ಸಂಸ್ಕೃತಿಯ ನಿರೂಪಣೆ ಎಂಬ ವಿಷಯದ ಕುರಿತು ಸಂಶೋಧನಾ ಕೆಲಸಗಳನ್ನು ಸಹ ಪೂರ್ಣಗೊಳಿಸುತ್ತಾರೆ. ಇವರು ರಾಜ್ಯ ಮತ್ತು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡನೆ ಮಾಡಿರುವುದಲ್ಲದೆ, ಇವರ ಅನೇಕ ಲೇಖನಗಳು ISBN ಸಂಖ್ಯೆಗಳನ್ನೂಳಗೊಂಡು ಪ್ರಕಟಿತವಾಗಿವೆ. ವೈದೇಹಿ ಕಥೆಗಳಲ್ಲಿ ಅನಾವರಣಗೊಂಡ ಪ್ರಾದೇಶಿಕ ಸಂಸ್ಕೃತಿ ಹಾಗೂ ಜಾನಪದ ಸಿರಿ ಇವರ ಪ್ರಕಟಿತ ಕೃತಿಗಳಾಗಿವೆ.

ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರು 2013 -16 ರವರಗೆ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ,2016-19 ರವರಗೆ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!