spot_img
Monday, March 23, 2026
spot_img

ಕೊಲ್ಲೂರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಕೊಲ್ಲೂರು: ಅತೀ ಕಡಿಮೆ ಸಮಯದಲ್ಲಿ ಕಾರ್ಯಕ್ರಮ ಆಯೋಜನೆ ಕಷ್ಟಕರವಾದದ್ದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಸಿ. ಕುಮಾರ ಬೆಕ್ಕೇರಿಯವರು ಅದ್ಭುತ ಕಾರ್ಯಕ್ರಮ ಅಯೋಜಿಸಿ ಸರಕಾರದ ಸುತ್ತೋಲೆಯ ಕಳಕಳಿಯನ್ನು ಶಿರಸಾವಹಿಸಿ ಮೆರೆದರು. ಗೌರವಾನ್ವಿತ ಪ್ರಧಾನ ಮಂತ್ರಿಗಳು ಕೇದಾರನಾಥದಲ್ಲಿ ಮಹಾಸಂತ ಆದಿ ಶಂಕರಾಚಾರ್ಯರ ಪುತ್ತಳಿ ಅನಾವರಣಗೊಳಿಸುತ್ತಿರುವ ಪ್ರಯುಕ್ತ ಏಕ ಕಾಲದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೊಲ್ಲೂರು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಗಳಾದ ಎಸ್. ಪಿ. ಎಮ್. ಮಹೇಶ್ ಮಾತನಾಡಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸ್ವರ್ಣಮುಖಿ ರಂಗಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಯಶಸ್ವಿ ಕಲಾವೃಂದ ಕೊಮೆ, ತೆಕ್ಕಟ್ಟೆಯ ಚಿಣ್ಣರ ಯುಗಳ ಸಂವಾದ ಯಕ್ಷಗಾನ ತಾಳಮದ್ದಲೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಹೇಶ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ, ಕಲಾಪೋಷಕ ರಾಮಕೃಷ್ಣ ಅಡಿಗ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸುದರ್ಶನ ಉರಾಳ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಕೆ.ಪಿ. ಶೇಖರ, ಸಂಧ್ಯಾ ರಮೇಶ್, ಗಣೇಶ ಕಿಣಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೆಂಕಟೇಶ ವೈದ್ಯ ಕೊಮೆ ಕಾರ್ಯಕ್ರಮದ ನಿರೂಪಣೆ ಮಾಡಿದರು. ಬಳಿಕ ಯಶಸ್ವಿ ಕಲಾವೃಂದದ ಪುಟಾಣಿಗಳು ಸುಧನ್ವಾರ್ಜುನ, ಕೃಷ್ಣಾರ್ಜುನ, ದ್ರೌಪದಿ ಪ್ರತಾಪದ ಕೆಲವು ದೃಶ್ಯಗಳನ್ನು ಯಕ್ಷಗಾನದ ಸಂವಾದದ ಮೂಲಕ ರಂಗದಲ್ಲಿ ಪ್ರಸ್ತುತ ಪಡಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!