spot_img
Thursday, May 7, 2026
spot_img

ಶುಭಲಕ್ಷ್ಮೀ ಆರ್. ನಾಯಕ್ ಅವರ ಕೃತಿ ಲೋಕಾರ್ಪಣೆ

ಕಾರ್ಕಳ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನೇತೃತ್ವದಲ್ಲಿ ಶುಭಲಕ್ಷ್ಮೀ ಆರ್. ನಾಯಕ್ ಅವರ ಬೆಸುಗೆ ಇದ್ದರೆ ವಸುಧೆ ಕವನ ಸಂಕಲನ ಕೃತಿ ಲೋಕಾರ್ಪಣೆ ಸಮಾರಂಭ ಸೋಮವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಂಗಮಂದಿರದಲ್ಲಿ ಜರಗಿತು.

ಉಡುಪಿ ಜಿಲ್ಲೆ ಕಸಾಪ ನಿಕಟ ಪೂರ್ವ ಜಿಲ್ಲಾಧ್ಯಕ್ಷರು ಹಾಗೂ ಸಾಹಿತಿಗಳಾದ ನೀಲಾವರ ಸುರೇಂದ್ರ ಅಡಿಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ಬಿ. ಜನಾರ್ದನ ಭಟ್ ಕೃತಿ ಲೋಕಾರ್ಪಣೆ ಮಾಡಿದರು. ಲಯನ್ಸ್ ಜಿಲ್ಲಾ ನಿಕಟಪೂರ್ವ ಜಿಲ್ಲಾ ಗವರ್ನರ್ ಎನ್. ಎಂ. ಹೆಗ್ಡೆ, ಕಾರ್ಕಳ ತಾಲೂಕು ಕಸಾಪ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಮೀನಕಳಿಯ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ನಿರಂಜನ್ ವಿ. ನಾಯಕ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಕೃತಿ ರಚನೆಕಾರರಾದ ಶುಭಲಕ್ಷ್ಮೀ ಆರ್. ನಾಯಕ್, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಕಾರ್ಯದರ್ಶಿ ಕಾಸ್ರಬೈಲು ಸುರೇಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಉಪಸ್ಥಿತರಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರು ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನಿಕಟ ಪೂರ್ವ ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!