spot_img
Friday, March 27, 2026
spot_img

ಕುಂದಾಪುರ ಶ್ರೀ ಕುಂದೇಶ್ವರ ಲಕ್ಷ ದೀಪೋತ್ಸವ ಸಂಪನ್ನ

ಕುಂದಾಪುರ: ಪುರಾಣ ಪ್ರಸಿದ್ಧ ಕುಂದೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಪೂರ್ವಾಹ್ನ 9ರಿಂದ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶತರುದ್ರಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸೂರ್ಯೋದಯದಿಂದ ಸೂರ್ಯಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟದಿಂದ ಶ್ರೀ ದೇವರ ನಾಮ ಸಂಕೀರ್ತನೆ ನಡೆಯಿತು. ಸಂಜೆ ಲಕ್ಷದೀಪೋತ್ಸವ ಪ್ರಯುಕ್ತ ನೆರೆದಿದ್ದ ಅಸಂಖ್ಯ ಭಕ್ತರು ಕುಂದೇಶ್ವರ ದೇವರಿಗೆ ಹಣತೆ ದೀಪ ಬೆಳಗಿ ದೇವರ ದರ್ಶನ ಪಡೆದರು. ದೇವಳದ ಪುಷ್ಪ ರಥೋತ್ಸವ ಹಾಗೂ ಶ್ರೀ ದೇವರ ಕಟ್ಟೆಪೂಜೆ ನಡೆಯಿತು.

ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದು ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರಬರುವಾಗ ಹಳಗ-ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಣೆ. ಕೊನೆಯ ಸುತ್ತಿನಲ್ಲಿ ಶ್ರೀ ದೇವರು ಪಲ್ಲಕ್ಕಿಯನ್ನೇರಿ ಕ್ರಮಿಸಲಾಗುತ್ತದೆ.ನಂತರ ವೈಭವದ ಪುರಮೆರವಣಿಗೆಯ ನಡೆಯಿತು. ಬಗೆ-ಬಗೆಯ ಆಕರ್ಷಣೆಗಳು. ನಾಗಸ್ವರವಾದನ, ಸಾಂಪ್ರದಾಯಿಕ ವಾದ್ಯ, ಜಾನಪದ ನೃತ್ಯಗಳು ವಿಶೇಷ ಆಕರ್ಷಣೆಯಾಗಿತ್ತು. ಶ್ರೀ ದೇವರ ಉತ್ಸವ ದೇವಾಲಯದಿಂದ ಹೊರಟು, ಹೊಸ ಬಸ್‌ಸ್ಟಾಂಡ್ ಬಳಿ ತಿರುಗಿ, ಪುರಸಭೆಯ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಮೂಲಕ ಹಂಗ್ಳೂರು ಗೆಳೆಯರ ಬಳಗದವರೆಗೂ ಹೋಗಿ, ನಂತರ ಬೆಳಗಿನ ಜಾವ ದೇವಾಲಯದ ರಥಬೀದಿಯ ಕಡೆಗೆ ಆಗಮಿಸಿದರು.

ಭಕ್ತಾದಿಗಳು ಉತ್ಸವ ಕ್ರಮಿಸುವ ಮಾರ್ಗದಲ್ಲಿ ಅಲ್ಲಲ್ಲಿ ಆಕರ್ಷಕ ವೇದಿಕೆಗಳನ್ನು ನಿರ್ಮಿಸಿ, ಅಲ್ಲಿಗೆ ಶ್ರೀ ದೇವರನ್ನು ಆಹ್ವಾನಿಸಿ, ಪೂಜೆ ನೆರವೇರಿಸಿದರು. ಭಕ್ತಿ ಶ್ರದ್ಧೆಯಿಂದ ಬೀಳ್ಕೊಡುತ್ತಾರೆ. ಸುಮಾರು 20 ನಿಮಿಷ ಅವಧಿಯ ಈ ಕಟ್ಟೆಪೂಜೆಯಲ್ಲಿ ಭಕ್ತಾದಿಗಳಿಗೆಲ್ಲ ಪ್ರಸಾದ ವಿತರಣೆ ನಡೆಯುತ್ತದೆ. ಹೀಗೆ ಸುಮಾರು ಹದಿನಾರು ಕೇಂದ್ರಗಳಲ್ಲಿ ಕುಂದೇಶ್ವರನಿಗೆ ಕಟ್ಟೆಪೂಜೆ ನಡೆಯಿತು.

ದೇವಾಲಯದ ಅಶ್ವತ್ಥಕಟ್ಟೆಯಲ್ಲೊಂದು ಪೂಜೆ, ಅಷ್ಟಾವಧಾನ ಸೇವೆ. ದೇವಾಲಯದ ಹೊರ ಸುತ್ತಿನಲ್ಲಿ ಮತ್ತೊಂದು ಕಟ್ಟೆಪೂಜೆ. ಪ್ರದಕ್ಷಿಣ ಪಥದಲ್ಲಿರುವ ಈಡುಗಲ್ಲಿಗೆ ಸಂಪ್ರದಾಯದಂತೆ ತೆಂಗಿನ ಕಾಯಿ ಒಡೆಯುವುದು ಮೊದಲಾದ ಸಂಪ್ರದಾಯಗಳು ನಡೆದವು. ಕುಂದೇಶ್ವರ ಕೆರೆಯ ಸುತ್ತಲೂ ಹಚ್ಚುವ ಹಣತೆ ದೀಪದ ಬೆಳಕು ಕೆರೆಯಲ್ಲಿ ಪ್ರತಿಫಲನಗೊಂಡು ಒಂದು ಹೊಸ ಬೆಳಕಿನ ಲೋಕವನ್ನೇ ಸೃಷ್ಟಿಸಿತ್ತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್.ಕೃಷ್ಣಾನಂದ ಚಾತ್ರ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತೀಶ ಶೆಟ್ಟಿ, ವಿಶ್ವನಾಥ ಪೂಜಾರಿ, ನಾಗರಾಜ ರಾಯಪ್ಪನಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಹೆಚ್., ಸವಿತಾ ಜಗದೀಶ್, ಅರ್ಚಕರು, ಪದನಿಮಿತ್ತ ಅರ್ಚಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!