Sunday, September 8, 2024

ಯಡಮೊಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ಎಸ್.ಡಿ.ಎಂ.ಸಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ಕುಂದಾಪುರ: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ, ತಾಲೂಕು ಘಟಕ ಕುಂದಾಪುರ ಬೈಂದೂರು ವತಿಯಿಂದ ಬೈಂದೂರು ಶೈಕ್ಷಣಿಕ ವಲಯದ ಯಡಮೊಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ಎಸ್ಡಿ‌ಎಂಸಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಾಗಾರವನ್ನು ಎಸ್ಡಿ‌ಎಂಸಿ ಸಮನ್ವಯ ವೇದಿಕೆಯ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅವನೀಶ ಹೊಳ್ಳ ಉದ್ಘಾಟಿಸಿ, ಎಸ್ಡಿ‌ಎಂಸಿ ಸದಸ್ಯರು ತಮ್ಮ ಹಕ್ಕು ಮತ್ತು ಕರ್ತವ್ಯದ ಕುರಿತು ಕಾರ್ಯಗಾರದಲ್ಲಿ ಸಂಪೂರ್ಣ ಮಾಹಿತಿ ಪಡೆದುಕೊಂಡು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಕೇಂದ್ರಗಳು ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರಿ ಶಾಲೆಗಳು ಉಳಿಯಲಿ ಬೆಳೆಯಲಿ ನೆರೆಹೊರೆಯ ಸಮಾನ ಶಾಲೆಯಾಗಲಿ ಎಂಬ ವೇದಿಕೆಯ ಧ್ಯೇಯೋದ್ದೇಶಗಳನ್ನು ತಿಳಿಸಿದರು.
ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಸರಕಾರಿ ಶಾಲೆಗಳಲ್ಲಿ ಕಾನೂನಾತ್ಮಕವಾಗಿ ರಚನೆಗೊಂಡ ಎಸ್‌ಡಿ‌ಎಂಸಿಗಳಿಗೆ ತಮ್ಮ ಹಕ್ಕು ಮತ್ತು ಕರ್ತವ್ಯದ ಜವಾಬ್ದಾರಿಯ ಕುರಿತು ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಎಸ್.ವಿ ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿದರು.

ಎಡಮೊಗೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಘವೇಂದ್ರ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದೀಪಾ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಸತ್ಯವತಿ, ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ತಾಲೂಕು ಕಾರ್ಯದರ್ಶಿ ಜ್ಯೋತಿ ಶೆಟ್ಟಿ, ಹಲವರಿ ಮಠ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರಾದ ಕುಬೇರ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮೇಶ್ ನಾಯ್ಕ್ ವಂದಿಸಿದರು.

ತರಬೇತಿ ಕಾರ್ಯಾಗಾರದ ನಂತರ ಯಡಮೊಗೆ ಪಂಚಾಯಿತಿ ಘಟಕದ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಅಧ್ಯಕ್ಷರಾಗಿ ಸುಧೀರ್, ಉಪಾಧ್ಯಕ್ಷರಾಗಿ ಜ್ಯೋತಿ ಕೆ. ಕಾರ್ಯದರ್ಶಿಯಾಗಿ ರತ್ನಾಕರ, ಸಹ ಕಾರ್ಯದರ್ಶಿಯಾಗಿ ಸುಮತಿ ಶೆಟ್ಟಿ, ಕೋಶಾಧಿಕಾರಿಯಾಗಿ ಗಣೇಶ್ ಆಯ್ಕೆಯಾದರು. ಹಾಗೂ ಉಳಿದ 12 ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಸಮನ್ವಯ ವೇದಿಕೆಯ ಸಂಪನ್ಮೂಲ ವ್ಯಕ್ತಿಗಳಾದ ಸಾಧಿಕ್ ಮಾವಿನಕಟ್ಟೆ, ರಮ್ಯಾ ದಯಾನಂದ್, ಪದ್ಮಲತಾ ಹೊಳ್ಳ, ರಾಜೇಶ್ ಕೋಣಿ, ಗೀತಾ ಕೋಟೇಶ್ವರ, ವರದ ಅಂಕದಕಟ್ಟೆ, ಗೀತಾ ಕೋಣಿ, ನಾಗರತ್ನ ಶಿರೂರು, ಮತ್ತು ಎಡಮೊಗೆ ಮತ್ತು ಹಲವರಿ ಮಠ ಶಾಲೆ ಎಸ್.ಡಿ.ಎಂ.ಸಿ ಸದಸ್ಯರು ಶಿಕ್ಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!