spot_img
Friday, March 27, 2026
spot_img

ಗಂಗೊಳ್ಳಿ ಮತಗಟ್ಟೆಗೆ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಭೇಟಿ

ಕುಂದಾಪುರ: ವಿಧಾನ ಪರಿಷತ್ ಚುನಾವಣೆಯ ಗಂಗೊಳ್ಳಿ ಮತಗಟ್ಟೆಗೆ ಸಚಿವ, ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ನೀಡಿದರು.

ಚುನಾವಣೆಯ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಎಲ್ಲಾ ಗ್ರಾಪಂ.ಗಳಲ್ಲಿ ಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಗ್ರಾಪಂ ಸದಸ್ಯರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲವು ಸಾಧಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲ ಪ್ರಭಾರಿ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ ಕುಮಾರ್ ಗುಜ್ಜಾಡಿ, ತಾಪಂ ಮಾಜಿ ಸದಸ್ಯರಾದ ಸುರೇಂದ್ರ ಖಾರ್ವಿ, ಮಹೇಂದ್ರ ಪೂಜಾರಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಪೂಜಾರಿ, ಗಂಗೊಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್, ಗಂಗೊಳ್ಳಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು, ಗಂಗೊಳ್ಳಿ ಗ್ರಾಪಂ ಸದಸ್ಯರು, ಬಿಜೆಪಿ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!