spot_img
Friday, March 27, 2026
spot_img

ಕುಂದಾಪುರ ತಾಲೂಕು ಯುವ ಬಂಟರ ಸಂಘ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2021-22ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಯು 2021ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಅಥವಾ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 90% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ ಪ್ರಸ್ತುತ ಪ್ರಥಮ ವರ್ಷದ ಪದವಿಪೂರ್ವ, ಪದವಿ ತರಗತಿಯಲ್ಲಿ ಅಥವಾ ಯಾವುದೇ ವೃತ್ತಿಪರ ಶಿಕ್ಷಣ, ತರಬೇತಿಯ ಪ್ರಥಮ ವಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಪ್ರವೇಶ ಪಡೆದಿರಬೇಕು. ಬಂಟ ಸಮುದಾಯವನ್ನು ಪ್ರತಿನಿಧಿಸುವ ಕುಂದಾಪುರ ತಾಲೂಕಿನ ನಿವಾಸಿಯಾಗಿರಬೇಕು. ಅವಿಭಜಿತ ಬೈಂದೂರು ತಾಲೂಕಿನ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಬಡತನ ರೇಖೆಗಿಂತ ಕೆಳಗಿನ ಕುಟುಂಬದ ಪ್ರತಿನಿಧಿಯಾಗಿದ್ದು ಹೆತ್ತವರ ಕುಟುಂಬದ ವಾರ್ಷಿಕ ಆದಾಯ ರೂ. 50,000 ಮೀರಿರಬಾರದು. ಸಂಘದ ಅಧಿಕೃತ ಜಾಲತಾಣ www.youthbuntskundapur.com ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿಯಲ್ಲಿ ಯಾವುದೇ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗಿಲ್ಲ. ಆನ್‌ಲೈನ್ ಅರ್ಜಿಯು ದಿನಾಂಕ; 20.12.2021ರ ರಾತ್ರಿ 11.45ರವರೆಗೆ ಮಾತ್ರ ತೆರೆದಿರುತ್ತದೆ. ಅಗತ್ಯ ಮಾಹಿತಿಗಾಗಿ ವಿದ್ಯಾರ್ಥಿ ವೇತನ ಸಮಿತಿ ಸಂಚಾಲಕ ಪ್ರವೀಣ್ ಕುಮಾರ್ ಶೆಟ್ಟಿ ಹರ್ಕೂರು ಇವರನ್ನು 9481148038 ಮೂಲಕ ಹಾಗೂ ತಾಂತ್ರಿಕ ನೆರವಿಗಾಗಿ ವೆಬ್‌ಸೈಟ್ ನಿರ್ವಾಹಕ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಇವರನ್ನು 8762822427 ಮೊಬೈಲ್ ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ ಎಂಬುದಾಗಿ ಸಂಘದ ಗೌರವಾಧ್ಯಕ್ಷ ಡಾ. ರಂಜನ್ ಶೆಟ್ಟಿ ಮತ್ತು ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!