spot_img
Friday, March 27, 2026
spot_img

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ಕುಂದಾಪುರ: ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆ ಡಿ.7ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿವರಿಸುತ್ತ ಇಂದಿನ ಯುವ ಪೀಳಿಗೆ ಸಮಾಜಮುಖಿ ಕೆಲಸಗಳಲ್ಲಿ ಸಾದ್ಯವಾದಷ್ಟು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಭಾರತೀಯ ರೆಡ್ ಕ್ರಾಸ್‌ನ ಖಜಾಂಚಿ ಶಿವರಾಮ ಶೆಟ್ಟಿ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ಮಾತನಾಡಿ, ಯುವಶಕ್ತಿ ರಕ್ತದಾನದ ಮೂಲಕ ಇನ್ನೊಬ್ಬರ ಜೀವ ಉಳಿಸುವುದರ ಮಹತ್ವದ ಬಗ್ಗೆ ತಿಳಿಸಿ ರಕ್ತದಾನ ಮಾಡುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಸದಸ್ಯರಾದ ಗಣೇಶ್ ಆಚಾರ್ ಉಪಸ್ಥಿತರಿದ್ದರು.

ಕಾಲೇಜು ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಹರೀಶ್ ನಿರೂಪಿಸಿ, ಯುವ ರೆಡ್ ಕ್ರಾಸ್ ಘಟಕದ ಸಹ ಸಂಯೋಜಕಿ ಮಾಲತಿ ವಂದಿಸಿದರು. ಕಾಲೇಜು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!