spot_img
Friday, March 27, 2026
spot_img

ಕೋಟ ಶ್ರೀನಿವಾಸ ಪೂಜಾರಿ 4ನೇ ಬಾರಿ ವಿಧಾನ ಪರಿಷತ್ ಪ್ರವೇಶ

ಕುಂದಾಪುರ: ರಾಜ್ಯ ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿ ದ.ಕ ಉಡುಪಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಸಚಿವ, ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ದಾಖಲಿಸಿ, 4ನೇ ಬಾರಿಗೆ ಮೇಲ್ಮನೆ ಪ್ರವೇಶ ಮಾಡಿದ್ದಾರೆ.

ಇಂದು ನಡೆದ ಮತ ಎಣಿಕೆಯಲ್ಲಿ ಅವರು 3,672 ಮತಗಳನ್ನು ಪಡೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಮತಗಳ ಗೆಲುವು ಸಾಧಿಸಿದ್ದಾರೆ. ಒಟ್ಟು 6011 ಮತ ಚಲಾವಣೆಯಾಗಿದ್ದು, 56 ಮತಗಳು ಅಸಿಂಧುವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2079 ಮತಗಳನ್ನು ಪಡೆದು ಗೆಲುವು ಪಡೆದಿದ್ದಾರೆ. ಎಸ್.ಡಿ.ಪಿ.ಐನ ಮಹಮ್ಮದ್ ಶಾಫಿ 204 ಮತಗಳನ್ನು ಪಡೆದಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿಯವರು 2008ರಲ್ಲಿ ಸ್ಥಳೀಯಾಡಳಿತ ಸ್ಥಾನದಿಂದ ಉಡುಪಿ-ದ.ಕ ಅವಳಿ ಜಿಲ್ಲೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್‍ಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಮತ್ತೆ 2010ರಲ್ಲಿ ಅವಿರೋಧವಾಗಿ ಆಯ್ಕೆಯಾದರು. 2012ರಲ್ಲಿ ಮುಜರಾಯಿ ಸಚಿವರಾಗಿ ಸೇವೆ ಸಲ್ಲಿಸಿದರು. 2015ರಲ್ಲಿ ಮತ್ತೊಮ್ಮೆ ವಿಧಾನ ಪರಿಷತ್‍ಗೆ ಆಯ್ಕೆಗೊಂಡು, 2018ರಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಆಯ್ಕೆಯಾದರು. ನಂತರ ಯಡಿಯೂರಪ್ಪನವರ ಸಚಿವ ಸಂಪುಟ, ಹಾಗೂ ಪ್ರಸ್ತುತ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!